BREAKING : ರಾಜ್ಯ ನ್ಯಾಯಾಂಗ ಇಲಾಖೆಯಲ್ಲಿ ಗುರುವಾರ ಪ್ರಮುಖ ವರ್ಗಾವಣೆಗಳು ನಡೆದಿದೆ.

BREAKING : ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಾಗಿ ನೇಮಿಸಲಾಗಿದೆ.
114 ಜಿಲ್ಲಾ ನ್ಯಾಯಾಧೀಶರನ್ನು ಸಹ ಸಾಮಾನ್ಯ ವರ್ಗಾವಣೆ
ಹೈಕೋರ್ಟ್ ರಿಜಿಸ್ಟರ್ ಜನರಲ್ ಕೆ.ಎಸ್. ಭರತ್ ಕುಮಾರ್ ಅವರು ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದಾರೆ. ಜೊತೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ಸಹ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯಡಿ ವರ್ಗಾಯಿಸಲಾಗಿದೆ.
READ THIS : ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ – ಕರ್ನಾಟಕದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!

ಬೆಂಗಳೂರು ಪ್ರಧಾನ ಜಿಲ್ಲಾ ನ್ಯಾಯಾಧೀಶರಾಗಿ ನೇಮಕ
ವರ್ಗಾವಣೆ ಆದೇಶದ ಪ್ರಕಾರ, ಸಂತೋಷ ಗಜಾನನ ಭಟ್ ಅವರನ್ನು ಬೆಂಗಳೂರು ಪ್ರಧಾನ ಜಿಲ್ಲಾ ನ್ಯಾಯಾಧೀಶರಾಗಿ ನೇಮಿಸಲಾಗಿದ್ದು, ಅವರು ಜೂನ್ 1ರಿಂದ ತಮ್ಮ ಹೊಸ ಹುದ್ದೆಯ ಕಾರ್ಯಭಾರವನ್ನು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.
ಪ್ರಮುಖ ಹುದ್ದೆಗಳಲ್ಲಿ ಬದಲಾವಣೆ
ಪ್ರತಿ ವರ್ಷದಂತೆ ನಡೆಯುವ ನಿಯಮಿತ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಈ ಬದಲಾವಣೆಗಳು ನಡೆದಿವೆ ಎಂದು ಹೈಕೋರ್ಟ್ ಮೂಲಗಳು ತಿಳಿಸಿವೆ. ಈ ಕ್ರಮದೊಂದಿಗೆ ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಪ್ರಮುಖ ಹುದ್ದೆಗಳಲ್ಲಿ ಬದಲಾವಣೆ ನಡೆದಿದೆ.
MUST WATCH : ಗುಬ್ಬಿ ಪೊಲೀಸ್ ಠಾಣೆ ಫುಲ್ ಕ್ಲೀನ್ ಕ್ಲೀನ್ ಮೂಲೆಗೆ ಬಿದ್ದಿದ್ದ ವಾಹನಗಳು ಹರಾಜು




