Airport Jobs : 10th, ಪಿಯುಸಿ ಪಾಸ್ ಆಗಿದ್ರೆ ಸಾಕು – ವಿಮಾನ ನಿಲ್ದಾಣದಲ್ಲಿ ಉದ್ಯೋಗ.

Airport Jobs : ಉತ್ತರ ಪ್ರದೇಶದ ನೋಯ್ಡಾದ ಜೇವರ್ನಲ್ಲಿ ನಿರ್ಮಾಣವಾಗುತ್ತಿರುವ Noida International Airport ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.
ನೇರವಾಗಿ ಅರ್ಜಿ ಸಲ್ಲಿಸಲು ಅವಕಾಶ
ವಿಮಾನ ನಿಲ್ದಾಣದ ಕಾರ್ಯಾಚರಣೆ ಶೀಘ್ರದಲ್ಲೇ ಆರಂಭವಾಗಲಿರುವ ಹಿನ್ನೆಲೆ, ಒಟ್ಟು 2,442 ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಗ್ರೌಂಡ್ ಸ್ಟಾಫ್, ಕಾರ್ಗೋ ಎಕ್ಸಿಕ್ಯೂಟಿವ್ ಮತ್ತು ಲೋಡರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ವಿಶೇಷವೆಂದರೆ ಯಾವುದೇ ಏವಿಯೇಷನ್ ಡಿಪ್ಲೊಮಾ ಅಥವಾ ವಿಶೇಷ ತರಬೇತಿ ಇಲ್ಲದೆ ನೇರವಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
READ THIS : New Delhi : ಎರಡು ವಿಮಾನಗಳ ನಡುವೆ ಡಿಕ್ಕಿ – ತಪ್ಪಿದ ಭಾರೀ ಅನಾಹುತ
₹25,000 ರಿಂದ ₹35,000 ವರೆಗೆ ವೇತನ
ಗ್ರೌಂಡ್ ಸ್ಟಾಫ್ ಮತ್ತು ಕಾರ್ಗೋ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ 12ನೇ ತರಗತಿ ಪಾಸಾದ 18 ರಿಂದ 30 ವರ್ಷದೊಳಗಿನ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಹರಾಗಿದ್ದು, ಇವರಿಗೆ ಮಾಸಿಕ ₹25,000 ರಿಂದ ₹35,000 ವರೆಗೆ ವೇತನ ನೀಡಲಾಗುತ್ತದೆ. ಲೋಡರ್ ಹುದ್ದೆಗೆ 10ನೇ ತರಗತಿ ಪಾಸಾದ 20 ರಿಂದ 40 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ₹15,000 ರಿಂದ ₹25,000 ವರೆಗೆ ವೇತನ ನಿಗದಿಯಾಗಿದೆ.
ಭಾವಚಿತ್ರ ಮತ್ತು ಸಹಿಯನ್ನು ಅಪ್ಲೋಡ್ ಮಾಡುವುದು ಕಡ್ಡಾಯ
ಆಸಕ್ತ ಅಭ್ಯರ್ಥಿಗಳು ಜೂನ್ 15, 2026ರೊಳಗೆ ಅಧಿಕೃತ ವೆಬ್ಸೈಟ್ www.niasjewar.com ಮೂಲಕ ತಮ್ಮ ಇಮೇಲ್ ಹಾಗೂ ಮೊಬೈಲ್ ಸಂಖ್ಯೆಯನ್ನು ಬಳಸಿ ಆನ್ಲೈನ್ನಲ್ಲಿ ನೋಂದಾಯಿಸಿಕೊಳ್ಳಬೇಕು. ಅರ್ಜಿಯೊಂದಿಗೆ ಭಾವಚಿತ್ರ ಮತ್ತು ಸಹಿಯನ್ನು ಅಪ್ಲೋಡ್ ಮಾಡುವುದು ಕಡ್ಡಾಯವಾಗಿದೆ.
MUST WATCH : ಚಲಿಸುತ್ತಿದ್ದ ಬಸ್ನಲ್ಲಿ ಕಾಣಿಸಿಕೊಂಡ ಬೆಂಕಿ – ಪ್ರಯಾಣಿಕರನ್ನ ಬಚಾವ್ ಮಾಡಿದ್ದು ಯಾರು?




