BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ – ಬಸ್ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು, 6 ಜನ ಸಜೀವ ದಹನ!

BREAKING : ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಹೊತ್ತಿ ಉರಿದ ಕಾರು
ಯಾದಗಿರಿಯಿಂದ ರಾಯಚೂರಿನತ್ತ ಸಾಗುತ್ತಿದ್ದ ಕಾರಿಗೆ, ಬೆಂಗಳೂರಿನಿಂದ ಕಲಬುರ್ಗಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ, ಅಪಘಾತ ಸಂಭವಿಸಿದ ತಕ್ಷಣವೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
READ THIS : ತಂದೆ ಮುಖ್ಯಮಂತ್ರಿ ಆಗಿರುವವರೆಗೂ ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ – ಯತೀಂದ್ರ

ರಕ್ಷಣಾ ಕಾರ್ಯಕ್ಕೆ ಅಡಚಣೆ
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ ಕಾರು ಬೆಂಕಿಗೆ ಆಹುತಿಯಾದ ಕಾರಣ ರಕ್ಷಣಾ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದೆ ಎಂದು ತಿಳಿದುಬಂದಿದೆ.
BREAKING – ಪೊಲೀಸ್ ಭೇಟಿ, ಪರಿಶೀಲನೆ
ವಿಷಯ ತಿಳಿದ ತಕ್ಷಣ ಸುರಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಬೇಕಿದ್ದು, ಪ್ರಕರಣ ಕುರಿತು ತನಿಖೆ ಮುಂದುವರಿದಿದೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

MUST WATCH : ರಸ್ತೆ ಬದಿ ಕಸ ಸುರಿಯೋ ಮುನ್ನ ಇಲ್ನೋಡಿ – ಕಸ ಸುರಿದಿದ್ದಕ್ಕೆ ಕಂಪನಿಗೆ ಎಷ್ಟು ಫೈನ್?




