Vinay Kulkarni ಗೆ ಜೀವಾವಧಿ ಶಿಕ್ಷೆ ಪ್ರಕಟ – ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಪಾಲಾದ ಶಾಸಕ

ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಧಾರವಾಡದ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಎಲ್ಲಾ ಆರೋಪಿಗಳಿಗೂ ಜೀವಾವಧಿ ಶಿಕ್ಷೆ
ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಉಭಯ ಪಕ್ಷಗಳ ಅಂತಿಮ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ತೀರ್ಪನ್ನು ಕಾಯ್ದಿರಿಸಿದ್ದರು.
ಇದೀಗ ಶಿಕ್ಷೆಯ ಪ್ರಮಾಣ ಪ್ರಕಟವಾಗಿದ್ದು, ಎಲ್ಲಾ ಆರೋಪಿಗಳಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಸಿಬಿಐ ವಾದ ಕಠಿಣ
ಸಿಬಿಐ ಪರವಾಗಿ ವಾದ ಮಂಡಿಸಿದ ಸಹಾಯಕ ಸಾಲಿಸೇಟರ್ ಜನರಲ್ ಎಸ್.ವಿ. ರಾಜು ಅವರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಶಿಕ್ಷೆ ವಿಧಿಸುವಂತೆ ನ್ಯಾಯಾಲಯವನ್ನು ಮನವಿ ಮಾಡಿದರು. “ಈ ಕೊಲೆ ಕೃತ್ಯವು ಅತ್ಯಂತ ಹೀನಾಯವಾಗಿದ್ದು, ಇದು ನೇರವಾಗಿ ನ್ಯಾಯಾಂಗ ವ್ಯವಸ್ಥೆಗೆ ಧಕ್ಕೆ ತಂದಿದೆ” ಎಂದು ವಾದಿಸಿದರು.
ಆರೋಪಿಗಳ ಪರ ಮನವಿ ತಿರಸ್ಕಾರ
ಆರೋಪಿಗಳ ಪರ ವಕೀಲರು ಕುಟುಂಬ ಜವಾಬ್ದಾರಿ ಮತ್ತು ಮಾನವೀಯ ದೃಷ್ಟಿಯಿಂದ ಶಿಕ್ಷೆ ಕಡಿಮೆ ಮಾಡುವಂತೆ ಮನವಿ ಸಲ್ಲಿಸಿದರು. ಆದರೆ ನ್ಯಾಯಾಲಯ ಈ ವಾದವನ್ನು ಪರಿಗಣಿಸದೇ ಕಠಿಣ ಶಿಕ್ಷೆಯನ್ನು ವಿಧಿಸಿದೆ.
READ THIS : RCB ಫ್ಯಾನ್ಸ್ ಬಳಗ ಸೇರಿದ ಸ್ಟಾರ್ ಅಥ್ಲೀಟ್.. ಯಾರಿದು ಹೊಸ ಅಭಿಮಾನಿ..?

Vinay Kulkarni ಸೇರಿ ಎಲ್ಲಾ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
2016ರಲ್ಲಿ ಧಾರವಾಡದ ತಮ್ಮದೇ ಜಿಮ್ನಲ್ಲಿ ಯೋಗೇಶ್ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡ ನಂತರ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗಳು ನಡೆದಿದ್ದವು.
ಆದರೇ ಮಾಜಿ ಸಚಿವ, ಶಾಸಕ Vinay Kulkarni ಸೇರಿದಂತೆ ಎಲ್ಲಾ 16 ಅಪರಾಧಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ, 16 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿಸಿದೆ.

MUST WATCH : ಸಿದ್ದು ಟೀಂ ಡಿಕೆ ಟೀಂ ಅಂತಾ ಏನು ಇಲ್ಲ ಡಿಕೆ ಒಗ್ಗಟ್ಟಿನ ಮಂತ್ರ ಹೇಳ್ತಾ ಇರೋದ್ಯಾಕೆ




