
TRAGIC ACCIDENT In HASSAN: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಯಡೆಗೌಡನಹಳ್ಳಿ ಬಳಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಯುವಕರು ಸಾವಿಗೀಡಾದ ದಾರುಣ ಘಟನೆ ನಡೆದಿದೆ. ಮೃತಪಟ್ಟವರನ್ನು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ತರುಣ್ (19), ರೇವಂತ್ (26), ಹಾಗೂ ಗಾಂಧಿನಗರ ಬಡಾವಣೆಯ ಇರ್ಫಾನ್ (20) ಎಂದು ಗುರುತಿಸಲಾಗಿದೆ.
ಇನ್ನು ಹಾಸನದಿಂದ ಮೈಸೂರು ಕಡೆಗೆ ಹೊರಟಿದ್ದ ಸರ್ಕಾರಿ ಸಾರಿಗೆ ಬಸ್ (GOVT BUS) ಮತ್ತು ಮೈಸೂರು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ (BIKE) ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ (Accident) ಸಂಭವಿಸಿದ್ದು, ಇರ್ಫಾನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ರೇವಂತ್ ಮತ್ತು ತರುಣ್ ಅವರನ್ನು ತಕ್ಷಣವೇ ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಆಸ್ಪತ್ರೆಯಲ್ಲಿ (HOSPITAL) ಸಾವನ್ನಪ್ಪಿದ್ದಾರೆ.
ಇನ್ನು ವಿಷಯ ತಿಳಿದು ಘಟನಾ ಸ್ಥಳಕ್ಕೆ ಹಳ್ಳಿ ಮೈಸೂರು ಪೊಲೀಸ್ ಠಾಣೆಯ (POLICE STATION) ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದು, ಮೃತದೇಹಗಳನ್ನು ಶವಗಾರಕ್ಕೆ ರವಾನೆ ಮಾಡಿದರು. ಈ ಸಂಬಂಧ ಹಳ್ಳಿ ಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ (FIR) ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.




