Murder : ಕುಡಿದ ಮತ್ತಲ್ಲಿ ಸ್ನೇಹಿತರ ಮಧ್ಯೆ ಕಿರಿಕ್ – ಕೊಲೆಯಲ್ಲಿ ಅಂತ್ಯ

ಕುಡಿದ ಮತ್ತಲ್ಲಿ ಸ್ನೇಹಿತರ ನಡುವೆ ಕಿರಿಕ್ ಉಂಟಾಗಿ ಗೆಳೆಯನ ಅಂತ್ಯವಾದ ಘಟನೆ ಬೆಂಗಳೂರು ಹೊರವಲಯ ಸರ್ಜಾಪುರ ಸಮೀಪದ ಮಟ್ಟನಹಳ್ಳಿ ಕೆರೆ ಬಳಿ ನಡೆದಿದೆ.
ಕುಡಿದ ಮತ್ತಲ್ಲಿ ಕಿರಿಕ್
ಮೋಹನ್ (25) ಕೊಲೆಯಾದ ಯುವಕನಾಗಿದ್ದು, ತಮಿಳುನಾಡಿನ ಸಿಂಗಸದನಪಳ್ಳಿ ಗ್ರಾಮದ ನಿವಾಸಿ. ನೆನ್ನೆ ಸಂಜೆ ಸ್ನೇಹಿತ ಮನೋಜ್ ಜೊತೆ ಎಣ್ಣೆ ಪಾರ್ಟಿ ಮಾಡಲು ಬಂದಿದ್ದ ಮೋಹನ್, ಇಬ್ಬರೂ ಕಂಠಪೂರ್ತಿ ಕುಡಿದಿದ್ಧಾರೆ.
READ THIS : ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದರ್ಶನ ಸಮಯ ಬದಲಾವಣೆ

ತಲೆ ಮೇಲೆ ಕಲ್ಲು ಎತ್ತಿಹಾಕಿ Murder
ಮದ್ಯದ ನಶೆಯಲ್ಲಿ ಇಬ್ಬರ ನಟಡುವೆ ಮಾತಿನ ಚಕಮಕಿ ಉಂಟಾಗಿ ಗಲಾಟೆ ನಡೆದಿದೆ. ಈ ವೇಳೆ ಸ್ನೇಹಿತ ಮನೋಜ್, ಅಲ್ಲಿದ್ದ ಕಲ್ಲನ್ನು ತೆಗೆದುಕೊಂಡು ಮೋಹನ್ ತಲೆಗೆ ಮೇಲೆ ಎತ್ತಿಹಾಕಿದ್ದಾನೆ. ಇನ್ನು ಈ ಪರಿಣಾಮ ತೀವ್ರವಾಗಿ ಗಾಯಗೊಂಡ ಮೋಹನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಎಸ್ಪಿ ಭೇಟಿ, ಪರಿಶೀಲನೆ
ಇನ್ನು ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಆರೋಪಿ ಮನೋಜ್ ಅನ್ನು ಸರ್ಜಾಪುರ ಪೊಲೀಸರು ವಶಕ್ಕೆ ಪಡೆದಿದ್ದು, ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

MUST WATCH : ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ – ರೈತರ ಅನಿರ್ಧಿಷ್ಠಾವಧಿ ಮುಷ್ಕರ ಹೇಗಿದೆ




