Bidar ನಲ್ಲಿ ಹೀಟ್ವೇವ್ ದಾಳಿ – 20 ವರ್ಷದ ಯುವಕ ಹೀಟ್ ಸ್ಟ್ರೋಕ್ಗೆ ಬಲಿ !

ಬೀದರ್ ಜಿಲ್ಲೆಯಲ್ಲಿ ಮುಂದುವರಿದ ತೀವ್ರ ಬಿಸಿಲಿನ ಪರಿಣಾಮ ಹೀಟ್ ಸ್ಟ್ರೋಕ್ ಸಂಭವಿಸಿ 20 ವರ್ಷದ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದ ಈ ದುರ್ಘಟನೆ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಉಷ್ಣತೆಯ ಅಪಾಯವನ್ನು ಮತ್ತೊಮ್ಮೆ ಎತ್ತಿಹಿಡಿದಿದೆ.
ತಾಪಮಾನ 45 ಡಿಗ್ರಿ ಸೆಲ್ಸಿಯಸ್ ವರೆಗೆ ಏರಿಕೆ
ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಸಮೀರ್ ಲಯಿಕ್ ಅಹ್ಮದ್ (20) ಕಮಲನಗರದ ಸಲೂನ್ ಒಂದರಲ್ಲಿ ಕೆಲಸ ಮಾಡುತ್ತಿದ್ದನು. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್ ವರೆಗೆ ಏರಿಕೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತ್ತು.
READ THIS : ವರದಕ್ಷಿಣೆ ಕಿರುಕುಳಕ್ಕೆ ಎರಡು ಮಕ್ಕಳ ತಾಯಿ ಬಲಿ!

ಬಿಸಿಲಾಘಾತಕ್ಕೆ ಕುಸಿದು ಸಾವು
ಘಟನೆಯ ದಿನ ಸಮೀರ್ಗೆ ತಲೆ ಸುತ್ತು ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿದ್ದು, ಸ್ಥಳೀಯ ಅಂಗಡಿಯಲ್ಲಿ ನೀರು ಕುಡಿದು ಸ್ವಲ್ಪ ವಿಶ್ರಾಂತಿ ಪಡೆದಿದ್ದಾನೆ. ಬಳಿಕ ಡಿಗ್ಗಿ ಗ್ರಾಮದ ಕಡೆ ರಾಷ್ಟ್ರೀಯ ಹೆದ್ದಾರಿ-50 ಮೂಲಕ ತೆರಳುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾನೆ. ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದರೂ, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಯುವಕ ಹೀಟ್ ಸ್ಟ್ರೋಕ್ಗೆ ಬಲಿ
ಪ್ರಾಥಮಿಕವಾಗಿ ಇದುಹೀಟ್ ಸ್ಟ್ರೋಕ್ ಕಾರಣದಿಂದ ಸಂಭವಿಸಿದ ಸಾವು ಎಂದು ಶಂಕಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಳಿಕ ನಿಖರ ಕಾರಣ ತಿಳಿಯಲಿದೆ. ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

Bidar – ಅನಗತ್ಯವಾಗಿ ಹೊರಗೆ ಹೋಗಬಾರದು
ಇದೇ ವೇಳೆ, ಜಿಲ್ಲೆಯಲ್ಲಿ ಮುಂದುವರಿದ ಉಷ್ಣ ಅಲೆಯ ಹಿನ್ನೆಲೆಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಅನಗತ್ಯವಾಗಿ ಹೊರಗೆ ಹೋಗಬಾರದು ಎಂದು ಅಧಿಕಾರಿಗಳು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
MUST WATCH : ನಿರ್ಮಾಣ ಆದ್ರು ಉದ್ಘಾಟನೆ ಆಗ್ತಿಲ್ಲ ಹಾಸ್ಟೆಲ್ – ಕೋಟಿ ವೆಚ್ಚದ ಹಾಸ್ಟೆಲ್ ಬಿರುಕು ಬಿಡ್ತಿದೆ




