Karnataka Rain : ಬಿರು ಬೇಸಿಗೆ ನಡುವೆ ಕೆಲವು ಭಾಗಗಳಲ್ಲಿ ಮಳೆಯ ಆರ್ಭಟ ಕೂಡ ಜೋರಾಗ್ತಿದೆ.

Karnataka Rain : ಭಾರೀ ಬಿಸಿಲಿಗೆ ಕಾದು ಕೆಂಡವಾಗ್ತಿರೋ ಜನರಿಗೆ ತಂಪೆರೆಯಲು ಮಳೆರಾಯ ಎಂಟ್ರಿ ಕೊಟ್ಟಿದ್ದಾನೆ. ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಇಂದು ರಾಜ್ಯದ ಅರ್ಧ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡ, ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಗೆ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಟ್ಟು 14 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ಆಲಿಕಲ್ಲು ಸಹಿತ ಮಳೆಯಾಗುವ ಜಿಲ್ಲೆಗಳು
ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಹಾಗೂ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
ಹೀಟ್ ವೇವ್ ಅಲರ್ಟ್
ಇನ್ನು ಮಧ್ಯಾಹ್ನ ವೇಳೆಗೆ ಬಿಸಿಲಿನ ತಾಪಮಾನ ಏರಿಕೆಯಾಗಿದ್ದು, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೀಟ್ ವೇವ್ ಅಲರ್ಟ್ ಕೂಡ ಜಾರಿಯಲ್ಲಿದೆ.
READ THIS : ನಾಳೆ PM ಉದ್ಘಾಟಿಸಬೇಕಿದ್ದ 79,000 ಕೋಟಿ ಮೌಲ್ಯದ ರಿಫೈನರಿ ಘಟಕಕ್ಕೆ ಬೆಂಕಿ

ಕರ್ನಾಟಕದಿಂದ ದಕ್ಷಿಣ ಭಾಗದವರೆಗೂ ಮಳೆ ಮುನ್ಸೂಚನೆ
ಏಪ್ರಿಲ್ 21ರಂದು 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಉತ್ತರ ಕರ್ನಾಟಕದಿಂದ ದಕ್ಷಿಣ ಭಾಗದವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಏಪ್ರಿಲ್ 23ರಂದು ಕೂಡ 10 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

MUST WATCH : ಬನ್ನೇರುಘಟ್ಟ ಸಫಾರಿ ವೇಳೆ ಆನೆ ಅಟ್ಯಾಕ್ – ಸಫಾರಿ ವಾಹನದ ಮಿರರ್ ಪುಡಿ ಪುಡಿ.!




