SSLC EXAM : ಸರ್ಕಾರದ ಗ್ರೇಡ್ ರೂಲ್ಸ್ಗೆ ಬ್ರೇಕ್ – ಹಳೆ ಪದ್ಧತಿಯನ್ನೇ ಮುಂದುವರಿಸಲು ಕೋರ್ಟ್ ಸೂಚನೆ.

ಹಿಂದಿ ಸೇರಿದಂತೆ ಎಸ್ಎಸ್ಎಲ್ಸಿ ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಹಳೆಯ ಪದ್ಧತಿಯನ್ನೇ ಮುಂದುವರಿಸುವಂತೆ ಸೂಚನೆ
ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡಿಂಗ್ ವ್ಯವಸ್ಥೆ ಜಾರಿಗೊಳಿಸುವ ಕುರಿತು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಈ ವರ್ಷ ಮಾತ್ರಹಳೆಯ ಪದ್ಧತಿಯನ್ನು ಮುಂದುವರಿಸುವಂತೆ ಸೂಚಿಸಿದೆ.
ಅರ್ಜಿ ವಜಾ ಆಗಿದೆ
ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. 2025ರ ಅಕ್ಟೋಬರ್ 28ರಂದು SSLC ಪರೀಕ್ಷೆ ಕುರಿತು ಸುತ್ತೋಲೆ ಹೊರಡಿಸಲಾಗಿದ್ದು, 2026ರ ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಪರೀಕ್ಷೆಗಳು ನಡೆದಿವೆ. ದಿನಪತ್ರಿಕೆ ವರದಿ ಆಧಾರದ ಮೇಲೆ ಅರ್ಜಿ ವಜಾ ಆಗಿದೆ ಎಂದು ವಾದಿಸಿದರು.
ಎಲ್ಲರನ್ನೂ ಪಾಸ್ ಮಾಡೋದಾ ನಿಮ್ಮ ಅಧಿಸೂಚನೆ?
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ಇಂದಿರೇಶ್ , ನಿಮ್ಮ ಅಧಿಸೂಚನೆಯ ಉದ್ದೇಶ ಏನು? ಕಳೆದ ವರ್ಷ 1.75 ಲಕ್ಷ ವಿದ್ಯಾರ್ಥಿಗಳು ಫೇಲ್ ಆಗಿದ್ರು. ಎಲ್ಲರನ್ನೂ ಪಾಸ್ ಮಾಡೋದಾ ನಿಮ್ಮ ಅಧಿಸೂಚನೆ? ನಿಮ್ಮ ಉದ್ದೇಶ ಅದಾಗಿರೋದಿಲ್ಲ ಎಂದರು.
READ THIS : ಭ್ರಷ್ಟಾಚಾರವೇ ಕಾಂಗ್ರೆಸ್ಗೆ ಅಸಲಿ ಗ್ಯಾರಂಟಿ – ಇಡಿ ದಾಳಿಗೆ BJP ಟೀಕೆ

ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ
ಇದಕ್ಕೆ ಉತ್ತರಿಸಿದ ಎಜಿ ಶಶಿಕಿರಣ್ ಶೆಟ್ಟಿ, ಹಿಂದಿ ಭಾಷೆ ಕಾರಣದಿಂದ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಶೇ.80 ರಷ್ಟು ವಿದ್ಯಾರ್ಥಿಗಳು ತೃತೀಯ ಭಾಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ ಎಂದು ತಿಳಿಸಿದರು. ತೃತೀಯ ಭಾಷೆಗೆ ಮಾತ್ರ ಗ್ರೇಡಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಅಂಕಗಳನ್ನು ನೀಡಲು ನಿರ್ದೇಶಿಸಿದ ಜಡ್ಜ್
ಎಲ್ಲರನ್ನೂ ಪಾಸು ಮಾಡುವ ನಿಮ್ಮ ಉದ್ದೇಶ ಸರಿ ಇರಬಹುದು. ಅದು ಕೇಳಲು ಚೆನ್ನಾಗಿದೆ. ಈ ವರ್ಷ ಹೀಗೆ ಇರಲಿ. ಮುಂದಿನ ವರ್ಷದಿಂದ ನೀವು ಇದನ್ನು ಮಾಡಬಹುದು. ಮುಂದಿನ ವರ್ಷ ಅಗತ್ಯ ಕ್ರಮ ತೆಗೆದುಕೊಳ್ಳಬಹುದು ಅಲ್ವಾ ಎಂದು ಹೇಳಿದ ಜಡ್ಜ್, ಅಂಕಗಳನ್ನು ನೀಡಲು ನಿರ್ದೇಶಿಸಿದರು.

MUST WATCH : ತೆರಿಗೆ ಕಟ್ಟುತ್ತಿದ್ದರೂ ಮಂಡಿಪೇಟೆದಾರರಿಗೆ ಸಿಗ್ತಿಲ್ಲ ಮೂಲಭೂತ ಸವಲತ್ತು..!




