KANTARA CHAPTER 1:ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ಬಹುನಿರೀಕ್ಷಿತ ಚಿತ್ರ ‘ಕಾಂತಾರಾ ಚಾಪ್ಟರ್ 1’ ಇದೀಗ ಬಿಡುಗಡೆಗೂ ಮೊದಲು ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಈಗ ಅಡ್ವಾನ್ಸ್ ಟಿಕೆಟ್ ಬುಕಿಂಗ್ನಲ್ಲಿ ದಾಖಲೆ ಬರೆಯುತ್ತದೆ.
ಕಾಂತಾರ 1 ಸಿನಿಮಾ ಅಡ್ವಾನ್ಸ್ ಟಿಕೆಟ್ ಬುಕಿಂಗ್ನಲ್ಲಿ ದಾಖಲೆ ನಿರ್ಮಾಣವಾಗಿದೆ. ಶನಿವಾರ (ಸೆಪ್ಟೆಂಬರ್ 27) ಬೆಳಿಗ್ಗೆ 11 ಗಂಟೆ ವೇಳೆಗೆ 47,210 ಟಿಕೆಟ್ಗಳು ಮಾರಾಟವಾಗಿದ್ದು, ಇದು ಅತಿ ಕಡಿಮೆ ಅವಧಿಯಲ್ಲಿ ಗರಿಷ್ಠ ಟಿಕೆಟ್ ಮಾರಾಟವಾದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವಿಶೇಷ ಅಂದರೆ ಅಡ್ವಾನ್ಸ್ ಬುಕಿಂಗ್ ಆರಂಭಗೊಂಡ 10 ನಿಮಿಷದಲ್ಲಿ 10 ಸಾವಿರ ಟಿಕೆಟ್ ಸೋಲ್ಡ್ ಆಗಿತ್ತು.
ಅಕ್ಟೋಬರ್ 2 ರಂದು ಬಿಡುಗಡೆಯಾಗುತ್ತಿರುವ ಈ ಪ್ಯಾನ್ ಇಂಡಿಯಾ ಸಿನಿಮಾ, ಕನ್ನಡ, ಹಿಂದಿ, ತೆಲುಗು, ತಮಿಳು, ಮಲೆಯಾಳಂ, ಬಂಗಾಳಿ ಮತ್ತು ಇಂಗ್ಲಿಷ್ ಸೇರಿ ಏಕೋ ಏಳು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಕನ್ನಡದ ಸಿನಿಮಾ ಒಂದು ದೇಶಾದ್ಯಂತ ಈ ಮಟ್ಟಿನ ಸದ್ದು ಮಾಡಿರುವುದು ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ.