CET ಪರೀಕ್ಷೆ ಬರೆಯುವವರಿಗೆ ಡ್ರೆಸ್ಕೋಡ್ ಕಡ್ಡಾಯ

ಕಳೆದ ವರ್ಷ CET ಪರೀಕ್ಷೆಯಲ್ಲಿ ಆದ ಜನಿವಾರದ ಜಟಾಪಟಿ ಭಾರೀ ವಿವಾದವನ್ನೇ ಸೃಷ್ಟಿಸಿತ್ತು. ಹೀಗಾಗಿ ಈ ಬಾರಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ತಯಾರಿ ಮಾಡಿಕೊಂಡಿದೆ. ರಾಜ್ಯದಲ್ಲಿ ಏಪ್ರಿಲ್ 23 ಮತ್ತು 24 ರಂದು ನಡೆಯಲಿರುವ ಸಿಇಟಿ ಪರೀಕ್ಷೆ ನಡೆಯಲಿದ್ದು, ಕಡ್ಡಾಯ ವಸ್ತ್ರ ಸಂಹಿತೆ ಜಾರಿಗೆ ಬಂದಿದೆ.
ವಸ್ತ್ರ ಸಂಹಿತೆ ಅಧಿಕಾರಿ ನೇಮಕ
ಈ ಬಾರಿ ಸುಮಾರು 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ಸಿಸಿಟಿವಿ ಕ್ಯಾಮೆರಾ ಹಾಗೂ ಸ್ಕ್ಯಾನಿಂಗ್ ವ್ಯವಸ್ಥೆ ಅಳವಡಿಸಲಾಗಿದೆ. ಜೊತೆಗೆ ವಸ್ತ್ರ ಸಂಹಿತೆ ಪಾಲನೆಗಾಗಿ ವಿಶೇಷ ಅಧಿಕಾರಿಗಳನ್ನು ನೇಮಿಸಲಾಗಿದೆ. ಆಯಾ ಕಾಲೇಜುಗಳ ಹಿರಿಯ ಪ್ರಾಧ್ಯಾಪಕರಿಗೆ ಈ ಕುರಿತು ತರಬೇತಿ ನೀಡಲಾಗಿದೆ ಎಂದು ಕೆಇಎ ತಿಳಿಸಿದೆ.
ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ
ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್, ಸರಳವಾದ ಪ್ಯಾಂಟ್ ಧರಿಸಬಹುದು. ಆದ್ರೆ ದೊಡ್ಡ ಬಟನ್, ಜಿಪ್ ಪಾಕೆಟ್ ಅಥವಾ ಹೆಚ್ಚಿನ ವರ್ಕ್ ಇರುವ ಬಟ್ಟೆಗಳನ್ನು ಧರಿಸಬಾರದು. ಚಪ್ಪಲಿ ಧರಿಸಿ ಬರಬೇಕು. ಕುತ್ತಿಗೆಯ ಸರ, ಕಿವಿಯೋಲೆ, ಉಂಗುರ ಅಥವಾ ಕಡಗಗಳಂತಹ ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ.

ಮಹಿಳಾ ಅಭ್ಯರ್ಥಿಗಳ ಡ್ರೆಸ್ ಕೋಡ್
ಮಹಿಳಾ ಅಭ್ಯರ್ಥಿಗಳು ಹೆಚ್ಚಿನ ಡಿಸೈನ್, ಹೂಗಳು, ಬ್ರೂಚ್ ಗಳು ಅಥವಾ ಬಟನ್ ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಪೂರ್ಣ ತೋಳಿನ ಬಟ್ಟೆ, ಜೀನ್ಸ್ ಪ್ಯಾಂಟ್ ಧರಿಸಬಾರದು. ಹೀಲ್ಡ್ ಶೂ, ಹೀಲ್ಡ್ ಚಪ್ಪಲಿ ಕೂಡ ಧರಿಸುವಂತಿಲ್ಲ.
READ THIS : ಬೆಂಗಳೂರಲ್ಲಿ ಜನಗಣತಿಗೆ ಗೈರಾದವರಿಗೆ ಜಿಬಿಎ ಶಾಕ್..!
ನಿಷೇಧಿತ ವಸ್ತುಗಳ ಪಟ್ಟಿ
ಪರೀಕ್ಷಾ ಕೇಂದ್ರಗಳಲ್ಲಿ ಕೆಳಗಿನ ವಸ್ತುಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ:
- ಮೊಬೈಲ್, ಪೆನ್ ಡ್ರೈವ್, ಬ್ಲೂಟೂತ್ ಸಾಧನಗಳು, ಇಯರ್ಫೋನ್ ಹಾಗೂ ವಾಚ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳು
- ಪೆನ್ಸಿಲ್, ಎರೇಸರ್, ಜಿಯೋಮೆಟ್ರಿ ಬಾಕ್ಸ್, ಪೇಪರ್, ಲಾಗ್ ಟೇಬಲ್ ಮುಂತಾದ ಸ್ಟೇಷನರಿ ವಸ್ತುಗಳು
- ಟೋಪಿ, ಮಾಸ್ಕ್, ಬಣ್ಣದ ಅಥವಾ ಲೋಹದ ನೀರಿನ ಬಾಟಲಿ ಹಾಗೂ ಆಹಾರ ಪದಾರ್ಥಗಳು
ಕೆಇಎ ಪ್ರಕಾರ ಈ ಕ್ರಮಗಳು ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಶಿಸ್ತು ಕಾಪಾಡಲು ಕೈಗೊಳ್ಳಲಾಗಿದೆ.

ಪರೀಕ್ಷೆಯಂದು ಈ ಕೆಳಗಿನ ವಸ್ತುಗಳನ್ನು ಮಾತ್ರ ತರಲು ಅನುಮತಿ
- ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ತರುವುದು.
- ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಕಡ್ಡಾಯಗೊಳಿಸಲಾಗಿದೆ.
- ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.
- ಮೇಲೆ ನಿಗದಿಪಡಿಸಲಾದ ವಸ್ತ್ರಸಂಹಿತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು. ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕಠಿಣ ಕ್ರಮವನ್ನು ಜರುಗಿಸಲಾಗುವುದು.
MUST WATCH : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಗ್ಗೆ ಡಿ.ಕೆ ಶಿವಕುಮಾರ್ ಹೀಗ್ಯಾಕಂದ್ರು..?




