ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿಯ ನಡುವೆ Trump ಅವರು ಕದನ ವಿರಾಮವನ್ನು ವಿಸ್ತರಿಸುವುದಾಗಿ ಘೋಷಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿಯ ನಡುವೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕದನ ವಿರಾಮವನ್ನು ವಿಸ್ತರಿಸುವುದಾಗಿ ಘೋಷಿಸಿದ್ದಾರೆ. ಜೊತೆಗೆ, ಇರಾನ್ ಮೇಲೆ ದಿಗ್ಬಂಧನವನ್ನು ಮುಂದುವರಿಸಲು ಅವರು ಮಿಲಿಟರಿಗೆ ನಿರ್ದೇಶನ ನೀಡಿದ್ದಾರೆ.
ಇರಾನ್ ಮೇಲಿನ ದಾಳಿಯನ್ನು ತಾತ್ಕಾಲಿಕವಾಗಿ ಸ್ಥಗಿತ
ಟ್ರುತ್ ಸೋಶಿಯಲ್ ನಲ್ಲಿ ನೀಡಿದ ಹೇಳಿಕೆಯಲ್ಲಿ ಅವರು, “ಇರಾನ್ ಸರ್ಕಾರವು ಗಂಭೀರವಾಗಿ ದುರ್ಬಲಗೊಂಡಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಪಾಕಿಸ್ತಾನದ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಹಾಗೂ ಪ್ರಧಾನಿ ಶಹಬಾಝ್ ಶರೀಫ್ ಅವರ ವಿನಂತಿಯ ಮೇರೆಗೆ, ಅವರ ನಾಯಕರು ಮತ್ತು ಪ್ರತಿನಿಧಿಗಳು ಸಂಯುಕ್ತ ಪ್ರಸ್ತಾಪವನ್ನು ಮಂಡಿಸುವವರೆಗೆ ಇರಾನ್ ಮೇಲಿನ ದಾಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ,” ಎಂದು ತಿಳಿಸಿದ್ದಾರೆ.

READ THIS : ಪ್ರಿಯಕರನ ಕಣ್ಣಿಗೆ ಬಟ್ಟೆ ಕಟ್ಟಿ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!
ಕದನ ವಿರಾಮ ವಿಸ್ತರಣೆ
“ದಿಗ್ಬಂಧನ ಕ್ರಮಗಳು ಮುಂದುವರಿಯಲಿವೆ. ಮಾತುಕತೆಗಳು ಪೂರ್ಣಗೊಳ್ಳುವವರೆಗೆ ಹಾಗೂ ಪ್ರಸ್ತಾವನೆ ಸಲ್ಲಿಕೆಯಾಗುವವರೆಗೆ ಕದನ ವಿರಾಮವನ್ನು ವಿಸ್ತರಿಸಲಾಗುತ್ತದೆ,” ಎಂದು Trump ಸ್ಪಷ್ಟಪಡಿಸಿದ್ದಾರೆ.
ಅಮೆರಿಕ ಅಧ್ಯಕ್ಷ Trump ಅವರಿಗೆ ಧನ್ಯವಾದ
ಇದರ ಬಗ್ಗೆ ಪ್ರತಿಕ್ರಿಯಿಸಿದ ಪಾಕಿಸ್ತಾನ ಪ್ರಧಾನಿ ಶಹಬಾಜ್ ಶರೀಫ್, “ಕದನ ವಿರಾಮ ವಿಸ್ತರಣೆಗಾಗಿ ಸಲ್ಲಿಸಿದ ನಮ್ಮ ವಿನಂತಿಯನ್ನು ಅಂಗೀಕರಿಸಿದಕ್ಕಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರಿಗೆ ಧನ್ಯವಾದಗಳು. ಇದರಿಂದ ರಾಜತಾಂತ್ರಿಕ ಪ್ರಯತ್ನಗಳಿಗೆ ಉತ್ತೇಜನ ಸಿಗಲಿದೆ,” ಎಂದು ಹೇಳಿದ್ದಾರೆ.

“ಸಂಘರ್ಷಕ್ಕೆ ಶಾಶ್ವತ ಅಂತ್ಯ ಕಂಡುಕೊಳ್ಳಲು ಇಸ್ಲಾಮಾಬಾದ್ ನಲ್ಲಿ ನಿಗದಿಯಾಗಿರುವ ಎರಡನೇ ಸುತ್ತಿನ ಮಾತುಕತೆಯಲ್ಲಿ ಎರಡೂ ದೇಶಗಳಿಗೆ ಕದನ ವಿರಾಮವನ್ನು ಪಾಲಿಸುವುದನ್ನು ಮುಂದುವರಿಸುತ್ತವೆ. ಸಮಗ್ರ ‘ಶಾಂತಿ ಒಪ್ಪಂದ’ ಸಾಧಿಸಲು ಸಾಧ್ಯವಾಗುತ್ತದೆ ಎಂಬ ವಿಶ್ವಾಸವಿದೆ,” ಎಂದು ಅವರು ಹೇಳಿದ್ದಾರೆ.
MUST WATCH : ಚಲಿಸುತ್ತಿದ್ದ ಲಾರಿಗೆ ಹಾರಿ ಯುವಕ ಸೂಸೈ* – ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ..!




