ರಾಜ್ಯಾದ್ಯಂತ ಇಂದು ಮತ್ತು ನಾಳೆ CET ಪರೀಕ್ಷೆ ನಡೆಯಲಿದೆ.

ರಾಜ್ಯಾದ್ಯಂತ ಎಂಜಿನಿಯರಿಂಗ್, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸುವ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET Exam) ಏಪ್ರಿಲ್ 23 ಮತ್ತು 24 ರಂದು ನಡೆಯಲಿದೆ. ಈ ಬಾರಿ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಕಲ ಸಿದ್ಧತೆ ಮಾಡಿಕೊಂಡಿದ್ದು, ಪರೀಕ್ಷಾ ಕೇಂದ್ರಗಳು ಸಂಪೂರ್ಣವಾಗಿ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಇರಲಿವೆ.
3,30,479 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ
ಇನ್ನು ಈ ಬಾರಿ ಒಟ್ಟು 3,30,479 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ. ಇದರಲ್ಲಿ 1,44,380 ಬಾಲಕರು, 1,86,099 ಬಾಲಕಿಯರು ಹಾಗೂ 970 ವಿಶೇಷಚೇತನರು ಪರೀಕ್ಷೆಗೆ ನೋದಾಯಿಸಿಕೊಂಡಿದ್ದಾರೆ. ರಾಜ್ಯದಾದ್ಯಂತ ಒಟ್ಟು 745 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಸುಗಮ ಪರೀಕ್ಷಾ ವ್ಯವಸ್ಥೆಗೆ 12,665 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಮೇಲೆ ನಿಗಾವಹಿಸಲು 15,265 ಸಿಸಿಟಿವಿಗಳನ್ನು ಅಳವಡಿಸಲಾಗಿದೆ.
ಕನ್ನಡ ಭಾಷಾ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯ
ನಿನ್ನೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯವಾಗಿದೆ. ಇಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ಪರೀಕ್ಷೆಗಳು ನಡೆಯಲಿದ್ದು, ನಾಳೆ ಗಣಿತ ಮತ್ತು ಜೀವ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.

READ THIS : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ – ನಟಿ Ranya Rao ಗೆ ಜಾಮೀನು
ವಸ್ತ್ರ ಸಂಹಿತೆ ಮತ್ತು ನಿರ್ಬಂಧಗಳು
ಈ ಬಾರಿಯೂ ಸಿಇಟಿ ಪರೀಕ್ಷೆಯಲ್ಲಿ ಕಟ್ಟುನಿಟ್ಟಿನ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಉದ್ದ ತೋಳುಗಳ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗಬಾರದು ಎಂದು ಸೂಚನೆ ನೀಡಲಾಗಿದೆ.
ಜೊತೆಗೆ ಕಿವಿ ಮತ್ತು ತಲೆ ಮುಚ್ಚುವಂತಹ ಉಡುಪುಗಳನ್ನು ಧರಿಸಿಕೊಂಡು ಬರಲು ಅನುಮತಿ ಇರುವುದಿಲ್ಲ.
ಮಂಗಳ ಸೂತ್ರವನ್ನು ಹೊರತುಪಡಿಸಿ ಯಾವುದೇ ಆಭರಣಗಳು ಅಥವಾ ಲೋಹದ ವಸ್ತುಗಳನ್ನು ಧರಿಸಬಾರದು. ಶೂಗಳನ್ನು ಹಾಕಿಕೊಂಡು ಪರೀಕ್ಷೆಗೆ ಹಾಜರಾಗಲು ಅವಕಾಶ ಇಲ್ಲ.
ಚಪ್ಪಲಿ ಅಥವಾ ಕಡಿಮೆ ಹಿಮ್ಮಡಿ ಇರುವ ಸ್ಯಾಂಡಲ್ಗಳನ್ನು ಮಾತ್ರ ಧರಿಸಬೇಕು ಎಂದು ನಿಯಮ ವಿಧಿಸಲಾಗಿದೆ.

2 ಗಂಟೆ ಮುಂಚಿತವಾಗಿ ಬರುವುದು ಕಡ್ಡಾಯ
ಧಾರ್ಮಿಕ ಉಡುಪು ಧರಿಸಿ ಪರೀಕ್ಷೆಗೆ ಬರಲು ಬಯಸುವವರು ಪರೀಕ್ಷೆ ಆರಂಭಕ್ಕೂ 2 ಗಂಟೆ ಮುಂಚಿತವಾಗಿ ಕೇಂದ್ರಕ್ಕೆ ಹಾಜರಾಗಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲಿಸಿ ಬಳಿಕ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ.
ಸೂಚನೆ :
ಒಟ್ಟಾರೆ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಸುಗಮವಾಗಿ ನಡೆಯಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ನಿಯಮಗಳನ್ನು ಪಾಲಿಸಿ ಪರೀಕ್ಷೆಗೆ ಹಾಜರಾಗುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
MUST WATCH : ಪ್ರಿಯಕರಿಗೆ ಬೆಂಕಿ ಹಚ್ಚಿ ಕೊಂದ ಸುಂದರಿ – ಸೂಸೈ* ನಾಟಕ ಆಡಿದ ಸುಪನಾತಿ ಲಾಕ್.!




