ಪರಂ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ – ಪರಮೇಶ್ವರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ತುಮಕೂರು ನಗರದಲ್ಲಿ ಕಬ್ಬಡ್ಡಿ ಪಂದ್ಯಾವಳಿ ವೇಳೆ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ್ದಾಗಿ ಗೃಹ ಸಚಿವರೇ ಬಹಿರಂಗವಾಗಿ ಹೇಳಿಕೆ ನೀಡಿದ್ದರ ಬೆನ್ನಲ್ಲೇ ಗೃಹ ಸಚಿವರ ವಿರುದ್ಧ ಎಫ್ಐಆರ್ ದಾಖಲು ಮಾಡಲು ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿತ್ತು. ಈ ಸಂಬಂಧ ಪರಮೇಶ್ವರ್ ವಿರುದ್ಧ ಎಫ್ಐಆರ್ ದಾಖಲು ಮಾಡಲು ಕೋರ್ಟ್ ಆದೇಶ ನೀಡಿದ್ರು ಎಫ್ಐಆರ್ ದಾಖಲು ಮಾಡಿಲ್ಲ ಎಂದು ದೂರುದಾರರು ಹಾಗೂ ವಕೀಲರು ನಿನ್ನೆ ಪೊಲೀಸ್ ಠಾಣೆ ಮುಂದೆಯೇ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

ಹೈಕೋರ್ಟ್ ಪ್ರಕರಣದ ತನಿಖೆಗೆ ತಡೆಯಾಜ್ಞೆ
ಇತ್ತ ಜನಪ್ರತಿನಿಧಿಗಳ ವಿಶೇಷ ಕೋರ್ಟ್ FIR ದಾಖಲು ಮಾಡಲು ಆದೇಶ ನೀಡಿದ ಬೆನ್ನಲ್ಲೇ ಇಂದು ಗೃಹ ಸಚಿವ ಪರಮೇಶ್ವರ್ ಅವರು 42 ನೇ ಎಸಿಜೆಎಂ ಕೋರ್ಟ್ ಆದೇಶ ಪ್ರಶ್ನಿಸಿ, ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ರು. ಅರ್ಜಿದಾರರ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಾದ ಮಾಡಿದ್ರು. ವಾದ- ವಿವಾದ ಆಲಿಸಿದ ಹೈಕೋರ್ಟ್ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆದಿದ್ದು, ತಮಾಷೆಗಾಗಿ ಮಾತನಾಡಿದರೂ ಕೇಸ್ ಹಾಕಬಹುದೇ, ಅವರು ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆ ನೀಡಿದಂತೆ ಕಾಣುತ್ತಿಲ್ಲ. ತನಿಖೆಗೆ ಆದೇಶಿಸುವ ಮುನ್ನ ಪೊಲೀಸರಿಂದ ವಿವರಣೆ ಪಡೆಯಬೇಕಿತ್ತು ಎಂದು ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಡಿದೆ. ಅಲ್ದೇ ಗೃಹ ಸಚಿವರ ಮೇಲಿನ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ವಿಚಾರಣೆಯನ್ನು ಕೋರ್ಟ್ ಮುಂದೂಡಿಕೆ ಮಾಡಿದೆ.
READ THIS : SSLC ಪರೀಕ್ಷೆ ಪಾಸ್ ಆದ ಖುಷಿಯಲ್ಲಿದ್ದ ವಿದ್ಯಾರ್ಥಿ ಸಾವು!

ಡಿಸಿ ಅವರೊಂದಿಗೆ 500 ರೂಪಾಯಿ ಬೆಟ್ಟಿಂಗ್
ತುಮಕೂರಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ನಡೆದಿದ್ದು, ಪಂದ್ಯದಲ್ಲಿ ವಿಜಯಪುರ ತಂಡ ಗೆಲ್ಲುತ್ತದೆ ಎಂದು ಡಿಸಿ ಶುಭ ಕಲ್ಯಾಣ್ ಅವರೊಂದಿಗೆ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ್ರಂತೆ. ಬಾಜಿ ಹಣವನ್ನು ಕಳೆದುಕೊಂಡ ಸಚಿವ ಪರಮೇಶ್ವರ್, ವಿಜೇತ ತಂಡಕ್ಕೆ ಪ್ರಶಸ್ತಿ ವಿತರಿಸುವಾಗ ಈ ವಿಷಯವನ್ನು ಸ್ವತಃ ಬಹಿರಂಗಪಡಿಸಿದ್ದರು. ಈ ಬಗ್ಗೆ ಹೆಚ್ ಆರ್ ನಾಗಭೂಷಣ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ವಿಚಾರ ಮುಂದಿನ ದಿನಗಳಲ್ಲಿ ಯಾವ ಸ್ವರೂಪಕ್ಕೆ ಪಡೆದುಕೊಳ್ಳುತ್ತದೆ ಅನ್ನೋದನ್ನ ಕಾದುನೋಡಬೇಕಿದೆ.
MUST WATCH : TUMAKURU | ನವಿಲುಗಳ ಸರಣಿ ಸಾ* – ಪಕ್ಷಿಗಳು ಸಾವನ್ನಪ್ಪುತ್ತಿರೋದು ಯಾಕೆ?




