Chinnaswamy ಯಲ್ಲಿ ಇಂದು ಬಿಗ್ ಫೈಟ್ – RCB ತವರು ನೆಲದ ಕೊನೆಯ ಲೀಗ್ ಪಂದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್

ಸಿಲಿಕಾನ್ ಸಿಟಿಯ ಕ್ರಿಕೆಟ್ ಪ್ರೇಮಿಗಳಿಗೆ ಇಂದು ಹಬ್ಬದ ದಿನ. ಐಪಿಎಲ್ ಹಬ್ಬದ ಭಾಗವಾಗಿ ಇಂದು ಸಂಜೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ (Chinnaswamy Stadium) ದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.
RCB ತವರು ನೆಲದ ಕೊನೆಯ ಲೀಗ್
ಇನ್ನು ಈ ಸೀಸನ್ನಲ್ಲಿ RCB ತನ್ನ ತವರು ಮೈದಾನದಲ್ಲಿ ಆಡುತ್ತಿರುವ ಕೊನೆಯ ಲೀಗ್ ಪಂದ್ಯವಾಗಿರುವುದರಿಂದ ಪೊಲೀಸ್ ಇಲಾಖೆ ಕ್ರೀಡಾಂಗಣದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಸುಮಾರು 2,300 ಪೊಲೀಸ್ ಸಿಬ್ಬಂದಿಗಳನ್ನು ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಡಿಸಿಪಿ, ಎಸಿಪಿ ಹಾಗೂ ಇನ್ಸ್ಪೆಕ್ಟರ್ ಹುದ್ದೆಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಸಮಗ್ರ ಭದ್ರತಾ ವ್ಯವಸ್ಥೆ ರೂಪಿಸಲಾಗಿದೆ.

ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ
ಜನಸಂದಣಿ ನಿಯಂತ್ರಣಕ್ಕೆ ವಿಶೇಷ ಯೋಜನೆ ರೂಪಿಸಲಾಗಿದ್ದು, ಕ್ರೀಡಾಂಗಣದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಗಾವಹಿಸಲಾಗಿದೆ. ಸಂಚಾರ ದಟ್ಟಣೆ ತಪ್ಪಿಸಲು ಟ್ರಾಫಿಕ್ ಪೊಲೀಸರು ಹಲವು ಕ್ರಮಗಳನ್ನು ಕೈಗೊಂಡಿದ್ದು, ಸ್ಟೇಡಿಯಂ ಹತ್ತಿರದ ರಸ್ತೆಗಳನ್ನು ‘ನೋ ಪಾರ್ಕಿಂಗ್’ ವಲಯಗಳಾಗಿ ಘೋಷಿಸಲಾಗಿದೆ. ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದ್ದು, ಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
READ THIS : ಕಬಡ್ಡಿ ಬೆಟ್ಟಿಂಗ್ ಆರೋಪ ಕೇಸ್ – ಪರಮೇಶ್ವರ್ ವಿರುದ್ಧದ FIR ಗೆ ಹೈಕೋರ್ಟ್ ತಡೆ
ಮಫ್ತಿಯಲ್ಲಿ ಕಾರ್ಯಾಚರಣೆ ನಡೆಸಲಿದ್ದಾರೆ ಪೊಲೀಸರು
ಕಳೆದ ಪಂದ್ಯಗಳ ವೇಳೆ ನೂರಕ್ಕೂ ಹೆಚ್ಚು ಟಿಕೆಟ್ಗಳನ್ನು ಕಾಳಸಂತೆಯಲ್ಲಿ (Black Market) ಮಾರಾಟ ಮಾಡುತ್ತಿದ್ದ ಪ್ರಕರಣಗಳು ಪತ್ತೆಯಾಗಿದ್ದವು.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಿಸಿಬಿ (CCB) ಪೊಲೀಸರು ಇಂದು ಮಫ್ತಿಯಲ್ಲಿ ಕ್ರೀಡಾಂಗಣದ ಸುತ್ತ ಕಾರ್ಯಾಚರಣೆ ನಡೆಸಲಿದ್ದಾರೆ. ಟಿಕೆಟ್ ಅಕ್ರಮ ಮಾರಾಟಗಾರರ ಮೇಲೆ ಸತತ ನಿಗಾ ಇರಿಸಲಾಗಿದೆ.

ಜಾಗರೂಕರಾಗಿರುವಂತೆ ಸೂಚನೆ
ಇನ್ನು ಪಂದ್ಯ ವೀಕ್ಷಣೆಗೆ ಸಾವಿರಾರು ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದ್ದು, ಜನದಟ್ಟಣೆಯನ್ನು ಬಳಸಿಕೊಂಡು ಕಳ್ಳತನ ಮಾಡುವ ತಂಡಗಳ ಮೇಲೂ ಪೊಲೀಸರು ಕಣ್ಣಿಟ್ಟಿದ್ದಾರೆ.
ಸಾರ್ವಜನಿಕರು ತಮ್ಮ ಮೊಬೈಲ್ ಸೇರಿದಂತೆ ಅಮೂಲ್ಯ ವಸ್ತುಗಳ ಬಗ್ಗೆ ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.
MUST WATCH : ಈ ಬಾರಿಯ ದಾಖಲೆ SSLC RESULT – ಯಾವ ಜಿಲ್ಲೆ FIRST.. ಯಾವ ಜಿಲ್ಲೆ LAST ಗೊತ್ತಾ?





