ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಯ ಜನಿವಾರ ತೆಗೆಸಿದ ಸಿಬ್ಬಂದಿ: CET ಪರೀಕ್ಷೆಯೊಂದಿಗೆ ಮತ್ತೆ ಶುರುವಾಯ್ತು ವಿವಾದ

ಕಳೆದ ವರ್ಷ CET ಪರೀಕ್ಷೆ ವೇಳೆ ಜನಿವಾರ ತೆಗೆದು ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜು ಮತ್ತು ಬೀದರ್ನ ಪರೀಕ್ಷಾ ಕೇಂದ್ರಗಳಲ್ಲಿ ವಿವಾದ ಉಂಟಾಗಿತ್ತು. ಜನಿವಾರದ ವಿಷಯದಲ್ಲಿ ರಾಜ್ಯಾದ್ಯಂತ ವಿರೋಧಗಳು ವ್ಯಕ್ತವಾಗಿ, ವಿಷಯ ಹೈಕೋರ್ಟ್ ಮೆಟ್ಟಿಲೇರಿ ಮುಖ್ಯಮಂತ್ರಿಗಳು ಕೂಡ ಜನಿವಾರ ತೆಗೆಸದಂತೆ ಸೂಚನೆ ನೀಡಿದ್ದರು. ಆದ್ರೂ ಇದೀಗ ಮತ್ತೆ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಘಟನೆ ಬೆಂಗಳೂರಿನಲ್ಲಿ ಮರುಕಳಿಸಿದೆ.
CET ಪರೀಕ್ಷೆಯೊಂದಿಗೆ ಮತ್ತೆ ಶುರುವಾಯ್ತು ವಿವಾದ
ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಪಾಸಣೆ ನೆಪದಲ್ಲಿ ಅಡ್ಡಗಟ್ಟಿದ ಸಿಬ್ಬಂದಿ, ಜನಿವಾರ ತೆಗೆಯುವಂತೆ ಸೂಚಿಸಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದಾಗ, ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರದಿಂದ ಹೊರಹೋಗಿ ಎಂದು ಧಮ್ಕಿ ಹಾಕಿದ್ದು, ಕೊನೆಗೆ ಪೋಷಕರು ಅನಿವಾರ್ಯವಾಗಿ ಜನಿವಾರವನ್ನು ತೆಗೆಸಿ ಮಗನನ್ನು ಪರೀಕ್ಷಾ ಕೊಠಡಿಗೆ ಕಳುಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

READ THIS : ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುಣಿಕೆ ಬಿಗಿದು ಬಾಲಕಿ ಸಾವು
ಈ ಬಗ್ಗೆ ದೂರು ನೀಡಬೇಡಿ
ಇನ್ನು ಈ ವಿಚಾರ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಶಿಕ್ಷಣ ಇಲಾಖೆ ಹಾಗೂ ಸಿಇಟಿ ಸೆಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪೋಷಕರ ಮನವೊಲಿಸಲು ಯತ್ನಿಸಿದ ಅಧಿಕಾರಿಗಳು, ಎಲ್ಲಿಯೂ ಈ ಬಗ್ಗೆ ದೂರು ನೀಡಬೇಡಿ ಎಂದು ಪತ್ರ ಬರೆಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಂದು ಆಗ್ರಹ
ಇನ್ನು ಜನಿವಾರದ ಮಹತ್ವ ತಿಳಿಯದೆ ತೆಗೆಸಿರುವುದು ಧಾರ್ಮಿಕ ವಿರೋಧಿ ಕಾರ್ಯವಾಗಿದ್ದು, ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಮತ್ತು ಧಾರ್ಮಿಕ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

MUST WATCH : ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು – ಕಾರು ಚಾಲಕ ಗ್ರೇಟ್ ಎಸ್ಕೇಪ್..!




