ಸಚಿವ D Sudhakar ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ D Sudhakar ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ.
ಇತ್ತೀಚಿನ ಮಾಹಿತಿ ಪ್ರಕಾರ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಮೊಣಕಾಲು ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಸಮಸ್ಯೆ
ಮಾಹಿತಿ ಪ್ರಕಾರ, ಮೊಣಕಾಲು ಆಪರೇಷನ್ ಸಂಬಂಧವಾಗಿ ಡಿ. ಸುಧಾಕರ್ ಅವರು ಮೊದಲಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ, ಶಸ್ತ್ರಚಿಕಿತ್ಸೆಯ ನಂತರ ಅವರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದೆ.
ಸೋಂಕು ಕಡಿಮೆಯಾಗದ ಹಿನ್ನೆಲೆಯಲ್ಲಿ ಅವರನ್ನು ಎರಡು ದಿನಗಳ ಹಿಂದೆ ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
MUST READ : Bengaluru : ಡಿವೈಡರ್ಗೆ ಡಿಕ್ಕಿ ಹೊಡೆದ ಮಾರುತಿ ಇಕೋ ಕಾರು..!!

ಐಸಿಯುನಲ್ಲಿ ಚಿಕಿತ್ಸೆ – ಲಂಗ್ಸ್ ಟ್ರಾನ್ಸ್ಪ್ಲಾಂಟ್ ಸರ್ಜರಿಗೆ ಸಿದ್ಧತೆ
ಶ್ವಾಸಕೋಶದಲ್ಲಿ ಸೋಂಕು ಕಡಿಮೆಯಾಗದ ಹಿನ್ನೆಲೆಯಲ್ಲಿ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮುಂದಾಗಿದ್ದಾರೆ. ಇದೇ ವೇಳೆ, ಅವರ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಲಂಗ್ಸ್ ಟ್ರಾನ್ಸ್ಪ್ಲಾಂಟ್ (Lung Transplant) ಶಸ್ತ್ರಚಿಕಿತ್ಸೆ ನಡೆಸುವ ಕುರಿತು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಸ್ತುತ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಡಾ. ವೆಂಕಟಗಿರಿ ನೇತೃತ್ವದ ವೈದ್ಯರ ತಂಡ ತೀವ್ರ ನಿಗಾ ವಹಿಸಿದೆ.
ಜೊತೆಗೆ, ಲಂಗ್ಸ್ ಟ್ರಾನ್ಸ್ಪ್ಲಾಂಟ್ ಸರ್ಜರಿ ಅಗತ್ಯವಿದೆಯೇ ಎಂಬ ಸಾಧ್ಯತೆ ಕುರಿತು ತಜ್ಞರು ಸಮಗ್ರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಚಿವರು ಚಿಕಿತ್ಸೆಗೆ ಸಮರ್ಪಕವಾಗಿ ಸ್ಪಂದಿಸದೆ ಇರುವ ಹಿನ್ನೆಲೆಯಲ್ಲಿ ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ.
ನಿನ್ನೆ (ಏಪ್ರಿಲ್ 23) ರಾತ್ರಿ ಸುಮಾರು 9.30ರ ವೇಳೆಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯರ ತಂಡ ಹೆಚ್ಚುವರಿ ಜಾಗ್ರತೆ ವಹಿಸಿದೆ.
ಸರ್ಕಾರ ಮತ್ತು ಸಾರ್ವಜನಿಕರಲ್ಲಿ ಆತಂಕ
ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ ವಲಯ ಮತ್ತು ಸಾರ್ವಜನಿಕರಲ್ಲಿ ಆತಂಕ ವ್ಯಕ್ತವಾಗಿದೆ.
ಇದೀಗ, ಅವರ ಆರೋಗ್ಯದ ಬಗ್ಗೆ ವೈದ್ಯರು ನಿರಂತರವಾಗಿ ನಿಗಾ ವಹಿಸುತ್ತಿದ್ದಾರೆ.
MUST WATCH : MAY 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ ಸ್ಫೋಟಕ ಭವಿಷ್ಯ ನುಡಿದ ಶಾಸಕ SURESH GOWDA | TUMAKURU NEWS |




