
Bannerghatta Park : ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಫಾರಿಗೆ ಬಂದಿದ್ದ ಪ್ರವಾಸಿಗನೊಬ್ಬ ಹೃದಯಾಘಾತದಿಂದ (HEART ATTACK) ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (Bannerghatta Park) ನಡೆದಿದೆ. ಮೃತಪಟ್ಟವರನ್ನು ಬೆಂಗಳೂರಿನ ನಾಗರಬಾವಿಯ ನಿವಾಸಿ ನಂಜಪ್ಪ (45) ಎಂದು ಗುರುತಿಸಲಾಗಿದೆ.
ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಸಫಾರಿಗೆ ಬಂದಿದ್ದ ನಂಜಪ್ಪ ಅವರು, ಸಫಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಏಕಾಏಕಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಘಟನೆ ನಡೆದ ತಕ್ಷಣ ಉದ್ಯಾನವನದ ಸಿಬ್ಬಂದಿ ಝೂ ಅಂಬುಲೆನ್ಸ್ (Zoo Ambulane) ಮೂಲಕ ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ರವಾನೆ ಮಾಡಿದರು. ಆದಾಗ್ಯೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಈ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.




