ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು 2026–2028ರ ಅವಧಿಗೆ ಕರ್ನಾಟಕ ಸಂಘ ಕತಾರ್ನ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಗಲ್ಫ್ ರಾಷ್ಟ್ರ ಕತಾರ್ನಲ್ಲಿರುವ ಅನಿವಾಸಿ ಕನ್ನಡಿಗರ ಹೆಮ್ಮೆಯ ಸಂಸ್ಥೆಯಾದ ‘ಕರ್ನಾಟಕ ಸಂಘ ಕತಾರ್’ನ 2026-2028ರ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಸಮುದಾಯಕ್ಕೆ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ಗೌರವದ ಸಂಗತಿ
ಅವರು ಈ ಜವಾಬ್ದಾರಿಯನ್ನು ಅತ್ಯಂತ ನಮ್ರತೆ ಮತ್ತು ಬದ್ಧತೆಯಿಂದ ಸ್ವೀಕರಿಸಿರುವುದಾಗಿ ತಿಳಿಸಿ, ಸಮುದಾಯಕ್ಕೆ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ಗೌರವದ ಸಂಗತಿಯಾಗಿದೆ ಎಂದು ಹೇಳಿದರು. ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ರವಿ ಶೆಟ್ಟಿ ಹಾಗೂ ಆಡಳಿತ ಸಮಿತಿ (2024–2026) ಅವರ ಸೇವೆ ಮತ್ತು ಕೊಡುಗೆಗಳನ್ನು ಅವರು ಕೃತಜ್ಞತೆಯಿಂದ ಸ್ಮರಿಸಿದರು. ಅವರ ಶ್ರಮದಿಂದ ಸಂಘದ ಅಭಿವೃದ್ದಿಗೆ ಬಲವಾದ ಅಡಿಪಾಯ ನಿರ್ಮಾಣವಾಗಿದೆ ಎಂದು ಹೇಳಿದರು.
ಸಂಘದ ಎಲ್ಲಾ ಪೂರ್ವಾಧ್ಯಕ್ಷರಾದ ಸತೀಶ್ ದೇಶಪಾಂಡೆ, ನಾಗರಾಜ್, ಪ್ರಕಾಶ್ ಬಾಬು, ಕೆ. ಪ್ರಭಾಕರ್, ಅರವಿಂದ ಪಾಟೀಲ, ಅರುಣ್ ಕುಮಾರ್ ಕೆ.ಎಂ., ವಿ.ಎಸ್. ಮನ್ನಂಗಿ, ದೀಪಕ್ ಶೆಟ್ಟಿ, ಎಚ್.ಕೆ. ಮಧು, ವೆಂಕಟ್ ರಾವ್, ದಿವಂಗತ ಮೈರ್ಪಾಡಿ ನಾಗೇಶ್ ರಾವ್, ಸಂಜಯ ಕುದರಿ, ಮಹೇಶ್ ಗೌಡ ಹಾಗೂ ರವಿ ಶೆಟ್ಟಿ ಅವರ ಸೇವೆಯನ್ನು ಅವರು ಪ್ರಶಂಸಿಸಿದರು.
READ THIS : ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುಣಿಕೆ ಬಿಗಿದು ಬಾಲಕಿ ಸಾವು
ಎಲ್ಲರಿಗೂ ಅರ್ಥಪೂರ್ಣ ಅವಕಾಶಗಳನ್ನು ಸೃಷ್ಟಿಸುವುದು ತಮ್ಮ ಗುರಿ
ಇನ್ನು ಸಂಘದ ಎಲ್ಲಾ ಸಮಿತಿ ಸದಸ್ಯರು, ಸಮುದಾಯ ಮುಖಂಡರು ಮತ್ತು ಸದಸ್ಯರ ನಿರಂತರ ಸೇವೆ ಹಾಗೂ ಸಮರ್ಪಣೆಯನ್ನು ಅವರು ಶ್ಲಾಘಿಸಿದರು. ಮುಂದಿನ ಅವಧಿಯಲ್ಲಿ ಕನ್ನಡ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದು, ಸಂಸ್ಕೃತಿಯನ್ನು ಉತ್ತೇಜಿಸುವುದು ಮತ್ತು ಎಲ್ಲರಿಗೂ ಅರ್ಥಪೂರ್ಣ ಅವಕಾಶಗಳನ್ನು ಸೃಷ್ಟಿಸುವುದು ತಮ್ಮ ಗುರಿಯಾಗಿದೆ ಎಂದು ಅವರು ತಿಳಿಸಿದರು.
“ಒಗ್ಗಟ್ಟಿನಿಂದ ಮತ್ತು ಸ್ಪಷ್ಟ ಉದ್ದೇಶಕವಾಗಿ ನಾವು ಮುಂದುವರಿದರೆ, ಇನ್ನಷ್ಟು ಮೈಲಿಗಲ್ಲು ಸಾಧಿಸಬಹುದು” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕತಾರ್ನ ಕನ್ನಡಿಗರ ಪ್ರಮುಖ ವೇದಿಕೆ
ಕರ್ನಾಟಕ ಸಂಘ ಕತಾರ್ ಭಾರತೀಯ ರಾಯಭಾರ ಕಚೇರಿಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಾಯಕ ಸಂಸ್ಥೆಯಾಗಿದ್ದು, ಕತಾರ್ನ ಕನ್ನಡಿಗರ ಪ್ರಮುಖ ವೇದಿಕೆಯಾಗಿದೆ.
MUST WATCH : ರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡೆಯಲ್ಲಿ ಉದ್ದಿಪನ ಸದ್ದು- ಕ್ರೀಡಾಪಟುಗಳು ಡ್ರಗ್ ತಗೊಂಡಿರೋ ಶಂಕೆ




