Chikkamagaluru ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಸಾಂಬಾರ್ ಮಾಡಿಲ್ಲ ಎಂದು ಅಪ್ಪ ಬೈದಿದ್ದಕ್ಕೆ 22 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ.

Chikkamagaluru : ಸಣ್ಣ ವಿಷಯವೇ ದೊಡ್ಡ ದುರಂತಕ್ಕೆ ಕಾರಣವಾದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಸಾಂಬಾರ್ ಮಾಡಿಲ್ಲ ಎಂದು ಅಪ್ಪ ಬೈದಿದ್ದಕ್ಕೆ 22 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಮೃತ ಯುವತಿ ಯಾರು?
ಈ ದುರ್ಘಟನೆಯಲ್ಲಿ ಮೃತಪಟ್ಟ ಯುವತಿಯನ್ನು ಸೌಜನ್ಯ ಪೂಜಾರಿ (22) ಎಂದು ಗುರುತಿಸಲಾಗಿದೆ. ಕುಟುಂಬದ ಸದಸ್ಯರ ಪ್ರಕಾರ, ಶನಿವಾರ ಬೆಳಗ್ಗೆ ಮನೆಯಲ್ಲಿನ ಸಾಮಾನ್ಯ ಕೆಲಸದ ವಿಚಾರವೇ ಈ ದುರಂತಕ್ಕೆ ಕಾರಣವಾಗಿದೆ.
MUST READ : Chikkamagalur : ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್ ಮರ..!

ಸಾಂಬಾರ್ ವಿಚಾರವೇ ದುರಂತಕ್ಕೆ ಕಾರಣ
ಮಾಹಿತಿ ಪ್ರಕಾರ, ಶನಿವಾರ ಬೆಳಗ್ಗೆ ಯುವತಿಯ ತಂದೆ ತರಕಾರಿ ತಂದುಕೊಟ್ಟು ಸಾಂಬಾರ್ ಮಾಡುವಂತೆ ಮಗಳಿಗೆ ಸೂಚಿಸಿದ್ದರು. ಆದರೆ ಮಧ್ಯಾಹ್ನ ಊಟಕ್ಕೆ ಮನೆಗೆ ಬಂದಾಗ ಮಗಳು ಸೌಜನ್ಯ ಸಾಂಬಾರ್ ಮಾಡಿರಲಿಲ್ಲ.
ಈ ಹಿನ್ನೆಲೆಯಲ್ಲಿ, “ಸಾಂಬಾರ್ ಏಕೆ ಮಾಡಿಲ್ಲ?” ಎಂದು ತಂದೆ ಮಗಳನ್ನು ಬೈದಿದ್ದಾರೆ. ನಂತರ ತಂದೆ ಪಕ್ಕದ ಮನೆಗೆ ಸಾಂಬಾರ್ ತರಲು ತೆರಳಿದ್ದರು.

ತಂದೆ ಬರುವಷ್ಟರಲ್ಲಿ ಆತ್ಮಹತ್ಯೆ
ಆದರೆ ತಂದೆ ಮನೆಗೆ ಮರಳುವಷ್ಟರಲ್ಲಿ, ಮಗಳು ಸೌಜನ್ಯ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ದೃಶ್ಯ ಕಂಡು ಕುಟುಂಬದವರು ಬೆಚ್ಚಿಬಿದ್ದಿದ್ದಾರೆ.
ತಕ್ಷಣ ಸ್ಥಳೀಯರಿಗೆ ಮಾಹಿತಿ ನೀಡಲಾಗಿದ್ದು, ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳಕ್ಕೆ ಗೋಣಿಬೀಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ, ಘಟನೆ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.
MUST WATCH : RAJANNA ಅವರೆಲ್ಲ ಸಚಿವರಾಗಿ ಹೋಗಿದ್ದಾರೆ – ನಮಗೂ ಮಂತ್ರಿಗಿರಿ ಕೊಡಲಿ ಎಂದ SHADAKSHARI | TUMAKURU NEWS |




