Madikeri : ಮಾನಸಿಕ ಖಿನ್ನತೆ: ಮನೆಯವರು ಮಲಗಿದ್ದಾಗಲೇ ಗುಂಡು ಹಾರಿಸಿಕೊಂಡು ಶಿಕ್ಷಕಿ ಸಾವು

ಕೊಡಗು ಜಿಲ್ಲೆಯ ಚೇರಂಬಾಣೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಮಾನಸಿಕ ಒತ್ತಡದಿಂದ ಖಿನ್ನತೆಗೊಳಗಾಗಿ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ಕೋವಿಯಿಂದ ಶೂಟ್ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ.
ಗುಂಡು ಹಾರಿಸಿಕೊಂಡು ಶಿಕ್ಷಕಿ ದಾರುಣ ಸಾವು
ಮೃತ ಶಿಕ್ಷಕಿಯನ್ನು 51 ವರ್ಷದ ರೋಹಿಣಿ ಎ ಯು ಎಂದು ಗುರುತಿಸಲಾಗಿದೆ. ಇವರು ಚೇರಂಬಾಣೆಯಲ್ಲಿರುವ ತಮ್ಮ ನಿವಾಸದಲ್ಲೇ ಗುಂಡು ಹಾರಿಸಿಕೋಮಡು ಸಾವನ್ನಪ್ಪಿದ್ದಾರೆ. ಮುಂಜಾನೆ 5 ಗಂಟೆ ಸುಮಾರಿಗೆ ಮನೆಯಲ್ಲಿ ಎಲ್ಲರೂ ಮಲಗಿದ್ದ ತಮ್ಮ ಮನೆಯಲ್ಲಿದ್ದ ಕೋವಿಯಿಂದಲೇ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ಧಾರೆ.
READ THIS : ಹೈವೇ ಡಾಬಾಗಳ ಮೇಲೆ ಫುಡ್ ಸೇಫ್ಟಿ ಅಧಿಕಾರಿಗಳ ದಾಳಿ..!

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಸದ್ಯ ಘಟನ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ Madikeri ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

MUST WATCH : ಪ್ರೀತಿಸಿ ಮದುವೆಯಾದಳಿಗೆ ಕೈಕೊಟ್ಟ ಪ್ರಿಯಕರ – ಗಂಡನಿಗಾಗಿ ಗರ್ಭಿಣಿ ಯುವತಿಯಿಂದ ಹೋರಾಟ




