Accident : ಚಾರ್ಮಾಡಿ ಘಾಟ್ನಲ್ಲಿ ಮದುವೆ ದಿಬ್ಬಣದ ಬಸ್ ಪಲ್ಟಿ

ಚಿಕ್ಕಮಗಳೂರು ಮತ್ತು ದಕ್ಷಿಣಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾದ ಚಾರ್ಮಾಡಿ ಘಾಟ್ನಲ್ಲ ಇಂದು ಭೀಕರ ಬಸ್ ಅಪಘಾತ ಸಂಭವಿಸಿದೆ.
ತುಮಕೂರಿನ 20ಕ್ಕೂ ಹೆಚ್ಚು ಮಂದಿಗೆ ಗಾಯ!
ಖಾಸಗಿ ಬಸ್ಸೊಂದು ಘಾಟಿಯ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಪಾವಗಡದ ಒಂದು ಕುಟುಂಬ ಮತ್ತು ಸಂಬಂಧಿಕರು ಧರ್ಮಸ್ಥಳದಲ್ಲಿ ಮದುವೆ ಮುಗಿಸಿಕೊಂಡು ತಮ್ಮ ಊರಿಗೆ ತೆರಳುತ್ತಿದ್ದರು. ಆದರೆ, ಚಾರ್ಮಾಡಿ ಘಾಟಿಯ ಅಪಾಯಕಾರಿ ತಿರುವುಗಳಲ್ಲಿ ಒಂದಾದ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆಯಲ್ಲೇ ಉರುಳಿಬಿದ್ದಿದೆ.

ಸ್ಥಳೀಯರಿಂದ ತಕ್ಷಣದ ರಕ್ಷಣೆ
ಇನ್ನು ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳೀಯರು ಹಾಗೂ ಇತರೆ ವಾಹನ ಸವಾರರು ತಕ್ಷಣವೇ ರಕ್ಷಣೆಗೆ ಧಾವಿಸಿದರು. ಬಸ್ಸಿನ ಒಳಗಿದ್ದ ಗಾಯಾಳುಗಳನ್ನು ಕಿಟಕಿ ಮತ್ತು ಬಾಗಿಲುಗಳ ಮೂಲಕ ಹೊರ ತೆಗೆದು ರಕ್ಷಣೆ ಮಾಡಲಾಗಿದೆ.
Accident ನ ಮಾಹಿತಿ ಸಿಕ್ಕ ತಕ್ಷಣವೇ 5 ರಿಂದ 6 ಆಂಬುಲೆನ್ಸ್ಗಳು ಸ್ಥಳಕ್ಕೆ ಆಗಮಿಸಿದವು. ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಹಾಗೂ ಕಕ್ಕಿಂಜೆಯ ಕೃಷ್ಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
READ THIS : ನಿನ್ನೆ ಕ್ಷಮೆ ಕೇಳಿ ಇಂದು ಮತ್ತೆ ಉಲ್ಟಾ ಹೊಡೆದ ನಟ ಚೇತನ್ ಅಹಿಂಸಾ!

Accident – ಪೊಲೀಸ್ ಭೇಟಿ, ಪರಿಶೀಲನೆ
ಇನ್ನು ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಮತ್ತು ಬೆಳ್ತಂಗಡಿ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ಕೆಲಕಾಲ ಚಾರ್ಮಾಡಿ ಘಾಟ್ನಲ್ಲಿ ಸಂಚಾರ ವ್ಯತ್ಯಯ ಉಂಟಾಗಿತ್ತು. ನಂತರ ಕ್ರೇನ್ ಸಹಾಯದಿಂದ ಬಸ್ಸನ್ನು ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

MUST WATCH : ರಾಜ್ಯದಲ್ಲಿ ಒಳ ಮೀಸಲಾತಿ ಘೋಷಣೆ ಸರ್ಕಾರದ ವಿರುದ್ಧ ಸಿಡಿದೆದ್ದ ಬಂಜಾರ ಸಮುದಾಯ




