Bengaluru : ಮನೆಯ ಕಾಂಪೌಂಡ್ನಲ್ಲಿದ್ದ ಗ್ಯಾಸ್ ಕಳ್ಳತನ! – ಸಿಸಿಟಿವಿಯಲ್ಲಿ ಸೆರೆ ಆಯ್ತು ಕಳ್ಳನ ಕೈಚಳಕ.

Bengaluru : ಇಷ್ಟು ದಿನ ಕಳ್ಳರು ಚಿನ್ನ ಬೆಳ್ಳಿ, ಹಣ ಹೀಗೆ ಬೆಲೆ ಬಾಳುವ ವಸ್ತುಗಳನ್ನು ಕದಿಯುತ್ತಿದ್ದರು. ಆದರೆ ಇದೀಗ ಕಾಲ ಬದಲಾಗಿದೆ. ಇತ್ತೀಚೆಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಅಭಾವ ಹೆಚ್ಚಾಗಿರುವುದರಿಂದ ನಗರದಲ್ಲಿ ಕಳ್ಳತನದ ಘಟನೆಗಳು ಹೆಚ್ಚಾಗ್ತಿವೆ.
ಕಳ್ಳರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆ
ಹೌದು.. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕಳ್ಳನೊಬ್ಬನ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮನೆಯ ಕಾಂಪೌಂಡ್ ಒಳಗೆ ಇರಿಸಿದ್ದ ಗ್ಯಾಸ್ ಸಿಲಿಂಡರ್ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಹೆಲ್ಮೆಟ್ ಧರಿಸಿ ಬೈಕ್ನಲ್ಲಿ ಬಂದ ಕಳ್ಳರು ಮನೆಯ ಕಾಂಪೌಂಡ್ ಒಳಗೆ ನುಗ್ಗಿ ಗ್ಯಾಸ್ ಬಾಕ್ಸ್ನಲ್ಲಿದ್ದ ಗ್ಯಾಸ್ ಸಿಲಿಂಡರನ್ನೇ ಕದ್ದು ಬೈಕ್ನಲ್ಲಿ ಪರಾರಿಯಾಗಿದ್ದಾರೆ. ಇನ್ನು ಖದೀಮರ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
READ THIS : ಖಾಸಗಿ ಬಸ್ ಪಲ್ಟಿ – ತುಮಕೂರಿನ 20ಕ್ಕೂ ಹೆಚ್ಚು ಮಂದಿಗೆ ಗಾಯ!

Bengaluru – ಹೆಚ್ಚಿನ ಜಾಗ್ರತೆ ವಹಿಸುವ ಅಗತ್ಯ
ನಗರದಲ್ಲಿ ಇಂತಹ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಜನರು ತಮ್ಮ ಮನೆಗಳ ಸುರಕ್ಷತೆಗೆ ಹೆಚ್ಚಿನ ಜಾಗ್ರತೆ ವಹಿಸುವ ಅಗತ್ಯವಿದೆ.
MUST WATCH : ಮೇಕೆ ಮೇಯಿಸಲು ಹೋಗಿದ್ದಾಗ ದುರಂತ – ಕೆರೆಯಲ್ಲಿ ಮುಳುಗಿ ಅಕ್ಕ ತಮ್ಮ ಸಾ*





