ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಕಡ್ಡಾಯ – ಶಿಕ್ಷಣ ಇಲಾಖೆ

ಮಕ್ಕಳಲ್ಲಿ ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವುದು ಮತ್ತು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಶಾಲೆಗಳಲ್ಲಿ ದಿನಪತ್ರಿಕೆ ಓದುವುದನ್ನುಕಡ್ಡಾಯಗೊಳಿಸಿದೆ. ಈ ಸಂಬಂಧ ಇಲಾಖೆಯು ಅಧಿಕೃತ ಸುತ್ತೋಲೆ ಹೊರಡಿಸಿದೆ.
ವಿದ್ಯಾರ್ಥಿಗಳಿಗೆ ದಿನಪತ್ರಿಕೆ ಓದಿಸುವುದು ಕಡ್ಡಾಯ
ಸುತ್ತೋಲೆ ಪ್ರಕಾರ, ಪ್ರತಿದಿನ ಶಾಲಾ ಪ್ರಾರ್ಥನೆ ಮುಗಿದ ತಕ್ಷಣ 10ರಿಂದ 15 ನಿಮಿಷಗಳ ಕಾಲ ವಿದ್ಯಾರ್ಥಿಗಳಿಗೆ ದಿನಪತ್ರಿಕೆ ಓದಿಸುವುದು ಕಡ್ಡಾಯವಾಗಲಿದೆ. ಈ ನಿಯಮವು ಸರ್ಕಾರಿ, ಅನುದಾನಿತ, ಖಾಸಗಿ ಹಾಗೂ ವಸತಿ ಶಾಲೆಗಳು ಸೇರಿದಂತೆ ರಾಜ್ಯದ ಎಲ್ಲಾ ವಿಧದ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುತ್ತದೆ.
READ THIS : ತಾಯಿಯ ಜೊತೆ ಮಾತನಾಡುವಾಗಲೇ ಬ್ರೈನ್ ಸ್ಟ್ರೋಕ್ – ಯುವತಿ ಸಾವು

10-15 ನಿಮಿಷಗಳನ್ನು ಪತ್ರಿಕೆ ಓದುವುದಕ್ಕಾಗಿಯೇ ಮೀಸಲಿಡಬೇಕು
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ, ಈ ಕ್ರಮವನ್ನು ಜಾರಿಗೆ ತರುವ ಮೂಲಕ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸವನ್ನು ಬೆಳೆಸಲು ಮುಂದಾಗಿದೆ. ಈಗಾಗಲೇ ಕೆಲವು ಶಾಲೆಗಳಲ್ಲಿ ಪ್ರಾರ್ಥನೆ ಸಮಯದಲ್ಲಿ ಪತ್ರಿಕೆ ಓದುವ ಪದ್ಧತಿ ಇದ್ದರೂ, ಇನ್ನು ಮುಂದೆ ಪ್ರಾರ್ಥನೆಯ ನಂತರ ವಿಶೇಷವಾಗಿ 10-15 ನಿಮಿಷಗಳನ್ನು ಪತ್ರಿಕೆ ಓದುವುದಕ್ಕಾಗಿಯೇ ಮೀಸಲಿಡಬೇಕು ಎಂದು ಸ್ಪಷ್ಟಪಡಿಸಲಾಗಿದೆ.
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಸಹಾಯಕ
ಇನ್ನು ಈ ಕ್ರಮವು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಸಹಾಯಕವಾಗುವುದರ ಜೊತೆಗೆ, ಓದುವ ಹವ್ಯಾಸವನ್ನು ಬೆಳೆಸಲು ನೆರವಾಗಲಿದೆ ಎಂದು ಇಲಾಖೆ ನಿರೀಕ್ಷಿಸಿದೆ.

MUST WATCH : ಬೆಂಗಳೂರಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ – ದರೋಡೆ ಮಾಡಿ ಲಾಕ್ ಆದ ಆರೋಪಿಗಳು..!




