Bengaluru ನಗರದಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!

ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದ್ದು, ಸುತ್ತಮುತ್ತಲ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ಮೃತ ಯುವತಿಯನ್ನು ಜಾರ್ಖಂಡ್ ಮೂಲದ 34 ವರ್ಷದ ಪೂಜಾ ದತ್ತಾ ಎಂದು ಗುರುತಿಸಲಾಗಿದೆ.
ಯುವತಿ ಅನುಮಾನಾಸ್ಪದ ಸಾವು
ಇನ್ನು ಸಿಲಿಕಾನ್ ಸಿಟಿಯ ಆಡುಗೋಡಿಯ ಬಾಡಿಗೆ ಮನೆಯಲ್ಲಿ ಪೂಜಾ ದತ್ತಾ ಮೃತದೇಹ ಅರೆಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮನೆಯಿಂದ ದುರ್ವಾಸನೆ ಬಂದ ಹಿನ್ನಲೆ ಬಾಗಿಲು ತೆಗೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಮನೆಯ ಮಾಲೀಕರು ಆಡುಗೋಡಿ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ಇನ್ನು ಯುವತಿಯ ಮೃತದೇಹ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿವೆ.
READ THIS : ಸ್ವಂತ ತಮ್ಮನ ಮನೆಗೆ ಬೆಂಕಿ ಹಚ್ಚಲು ಮುಂದಾದ ಅಕ್ಕ

ಮನೆ ಪರಿಶೀಲನೆ ವೇಳೆ ಕಂಪನಿಯ ಐಡಿ ಕಾರ್ಡ್ ಪತ್ತೆ
ಇನ್ನು ಪೂಜಾ ದತ್ತಾ ಈ ಹಿಂದೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಕೆಲಸ ಬಿಟ್ಟಿದ್ದು, ಕೆಲ ದಿನಗಳಿಂದ ಯಾವ ಕೆಲಸಕ್ಕೂ ಹೋಗುತ್ತಿರಲಿಲ್ಲ ಎನ್ನಲಾಗಿದೆ. ಇನ್ನು ಮನೆ ಪರಿಶೀಲನೆ ವೇಳೆ ಖಾಸಗಿ ಕಂಪನಿಯ ಐಡಿ ಕಾರ್ಡ್ ಪತ್ತೆಯಾಗಿದ್ದು, ಕೊಠಡಿಯಲ್ಲಿ ಕೆಲವು ಪೇಪರ್ಗಳು ಹರಿದು ಬಿದ್ದಿರುವುದು ಕಂಡುಬಂದಿದೆ. ಅಲ್ದೇ ಪೇಪರ್ಗಳ ಮೇಲೆ ಪ್ರೇಮಿಯ ಹೆಸರು ಬರೆದಿದೆ ಎನ್ನಲಾಗ್ತಿದ್ದು, ಈ ಬಗ್ಗೆ ಪೊಲೀಸರು ಮಾತ್ರ ಯಾವುದೇ ಮಾಹಿತಿಯನ್ನ ಖಚಿತಪಡಿಸಿಲ್ಲ.
Bengaluru : ಆಡುಗೋಡಿ ಪೊಲೀಸರು ಸ್ಥಳದಲ್ಲಿ ಪರಿಶೀಲನೆ
ಸದ್ಯ ಆಡುಗೋಡಿ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಹಾಗೆಯೇ ಕೋಣೆಯ ತುಂಬೆಲ್ಲಾ ಪೇಪರ್ಗಳು ಬಿದ್ದಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.

MUST WATCH : ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮಗು ಸಾ* – ಪತಿ ವಿರುದ್ಧ ದೂರು




