ಕೇಂದ್ರ ಹಣಕಾಸು ಸಚಿವೆ Nirmala Sitharaman Kollur ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

Kollur : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಈ ವೇಳೆ ಅವರು ಭಕ್ತಿಭಾವದಿಂದ ವಿಶೇಷ ಪೂಜೆ ಸಲ್ಲಿಸಿ ದೇವಾಲಯದ ವಿವಿಧ ಭಾಗಗಳನ್ನು ವೀಕ್ಷಿಸಿದರು.
MUST READ : Challakere ಬಳಿ ಸರ್ಕಾರಿ ಬಸ್ ಪಲ್ಟಿ – 44 ಪ್ರಯಾಣಿಕರು ಪಾರು..!!

ದರ್ಶನದ ನಂತರ ದೇವಾಲಯದ ಮುಂಭಾಗದಲ್ಲಿರುವ ಗರುಡಗಂಭದ ಮುಂದೆ ದೇವಾಲಯದ ಅರ್ಚಕರ ಜೊತೆ ನಿರ್ಮಲಾ ಸೀತಾರಾಮನ್ ಫೋಟೋ ಕ್ಲಿಕ್ಕಿಸಿಕೊಂಡರು. ಬಳಿಕ ದೇವಾಲಯದ ಆಡಳಿತ ಮಂಡಳಿಯವರು ಸಚಿವೆಗೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ದೇವಾಲಯ ಭೇಟಿಯನ್ನು ಪೂರ್ಣಗೊಳಿಸಿದ ನಂತರ ನಿರ್ಮಲಾ ಸೀತಾರಾಮನ್ ಅವರು ಅಲ್ಲಿಂದ ಉಡುಪಿ ನಗರದಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದರು.
MUST WATCH : SILICON CITYಯಲ್ಲಿ ಕುಡುಕರ ಹಾವಳಿ SOCIAL MEDIAದಲ್ಲಿ ವಿಡಿಯೋ ವೈರಲ್ | BENGALURU NEWS |




