ಸಿಎಂ Siddaramaiah ಅಧಿಕಾರ ಮುಂದುವರಿಕೆಗೂ ಹಾಗೂ ಪದತ್ಯಾಗಕ್ಕೂ ಸಿದ್ಧರಾಗಿದ್ದಾರೆ ಎಂದು ಮಾಜಿ ಸಚಿವ KN Rajanna ತಿಳಿಸಿದ್ದಾರೆ.

ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಮುಖ್ಯಮಂತ್ರಿ Siddaramaiah ಹಾಗೂ ಡಿಸಿಎಂ DK Shivakumar ಬೆಂಬಲಿಗರ ನಡುವೆ ತೆರೆಮರೆಯಲ್ಲಿ ಭಾರಿ ರಾಜಕೀಯ ಚಟುವಟಿಕೆಗಳು ನಡೆಯುತ್ತಿರುವ ಹಿನ್ನೆಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಮುಂದುವರಿಸಲು ಮತ್ತು ಅಗತ್ಯವಿದ್ದರೆ ಪದತ್ಯಾಗಕ್ಕೂ ಸಿದ್ಧರಾಗಿದ್ದಾರೆ ಎಂದು ಮಾಜಿ ಸಚಿವ K. N. Rajanna ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಗೊಂದಲವನ್ನು ಪಕ್ಷದ ಹೈಕಮಾಂಡ್ ಶೀಘ್ರದಲ್ಲಿ ಬಗೆಹರಿಸಬೇಕು. ಗೊಂದಲ ಬಗೆಹರಿಸಿದಷ್ಟು ರಾಜ್ಯಕ್ಕೆ ಒಳ್ಳೆಯದು. ಗೊಂದಲ ಮುಂದುವರಿಯಲು ಹೈಕಮಾಂಡ್ ಅವಕಾಶ ನೀಡಬಾರದು. ಹೈಕಮಾಂಡ್ ಏನು ಹೇಳುತ್ತದೆಯೋ ಅದಕ್ಕೆ ಸಿದ್ದರಾಮಯ್ಯ ಬದ್ಧರಾಗಿದ್ದಾರೆ. ಇದು ಆತುರದಲ್ಲಿ ತೆಗೆದುಕೊಳ್ಳುವ ನಿರ್ಧಾರವಲ್ಲ ಎಂದು ಹೇಳಿದ್ದಾರೆ.
MUST READ : Kollur ಮೂಕಾಂಬಿಕೆ ದೇವಿಯ ದರ್ಶನ ಪಡೆದ Nirmala Sitharaman..!!

ಅಧಿಕಾರ ಶಾಶ್ವತವಲ್ಲ. ಅಧಿಕಾರ ಕಳೆದುಕೊಂಡವರು ಮತ್ತೆ ಗಳಿಸಬಹುದು. Rahul Gandhi ಅವರ ನಿರ್ದೇಶನದಂತೆ ಹೋಗಬೇಕು ಎಂಬುದು ಸಿಎಂ ಮನಸ್ಥಿತಿ. ಸಿದ್ದರಾಮಯ್ಯ ಮುಂದುವರಿಯಬೇಕು ಎಂಬ ಬಗ್ಗೆ ನಾವೆಲ್ಲ ನಮ್ಮ ಅಭಿಪ್ರಾಯವನ್ನು ಹೈಕಮಾಂಡ್ಗೆ ತಿಳಿಸಿದ್ದೇವೆ ಎಂದು ರಾಜಣ್ಣ ಹೇಳಿದ್ದಾರೆ.

ಇದೇ ವೇಳೆ, ದಲಿತ ಸಿಎಂ ಆಗಬೇಕು ಎಂಬ ತನ್ನ ನಿಲುವಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ಅಹಿಂದ ವರ್ಗ ನಿಜವಾಗಿ ಸಮಾಧಾನವಾಗಿಲ್ಲ. 2013-18ರ ಸಿದ್ದರಾಮಯ್ಯ ಆಡಳಿತಕ್ಕೂ ಈಗಿನ 2023-28ರ ಅವಧಿಗೂ ಸಾಕಷ್ಟು ವ್ಯತ್ಯಾಸ ಇದೆ. ಮುಂದಿನ ಚುನಾವಣೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇರುವುದರಿಂದ, ಪಕ್ಷದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದಾರೆ.
MUST WATCH : BENGALURU | ರಾಜ್ಯದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ – ಧಗ ಧಗನೇ ಹೊತ್ತಿ ಉರಿದ ಶೆಡ್ ಗಳು..!




