ರಾಜ್ಯದ SSLC ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪರೀಕ್ಷೆ-2ಕ್ಕೆ ಉಚಿತ ನೋಂದಣಿ ಅವಕಾಶ ನೀಡಲಾಗಿದೆ.

ಬೆಂಗಳೂರು: 2026ನೇ ಸಾಲಿನ ರಾಜ್ಯದ ಎಸ್ಎಸ್ಎಲ್ಸಿ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ರಾಜ್ಯದ ಶೈಕ್ಷಣಿಕ ಇತಿಹಾಸದಲ್ಲೇ ಗಮನಾರ್ಹ ಸಾಧನೆ ದಾಖಲಾಗಿದೆ. ಒಟ್ಟು 94.18% ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ Madhu Bangarappa ಪತ್ರಿಕಾ ಪ್ರಕಟಣೆ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಹಂಚಿಕೊಂಡಿದ್ದಾರೆ.
MUST READ : ಮೇ 15ರೊಳಗೆ ಸಂಪುಟ ಪುನರ್ ರಚನೆ ಸಾಧ್ಯ – MLA Narayanaswamy ಸುಳಿವು ..!!

ಈ ಬಾರಿಯ ಪರೀಕ್ಷೆಯಲ್ಲಿ ಸುಮಾರು 45,415 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಅವರಲ್ಲಿ 1 ವಿಷಯದಲ್ಲಿ 20,691 ವಿದ್ಯಾರ್ಥಿಗಳು, 2 ವಿಷಯಗಳಲ್ಲಿ 10,509 ವಿದ್ಯಾರ್ಥಿಗಳು, 3 ವಿಷಯಗಳಲ್ಲಿ 6,103 ವಿದ್ಯಾರ್ಥಿಗಳು, 4 ವಿಷಯಗಳಲ್ಲಿ 3,799 ವಿದ್ಯಾರ್ಥಿಗಳು, 5 ವಿಷಯಗಳಲ್ಲಿ 2,552 ವಿದ್ಯಾರ್ಥಿಗಳು ಮತ್ತು ಎಲ್ಲಾ ವಿಷಯಗಳಲ್ಲಿ 1,716 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ ಎಂದು ವಿವರಿಸಲಾಗಿದೆ.

ಯಾವುದೇ ವಿದ್ಯಾರ್ಥಿ ಫಲಿತಾಂಶದಿಂದ ನಿರಾಶೆಗೊಂಡು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಬಾರದು ಎಂಬುದು ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಅನುತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಮುಂಬರುವ ‘ಪರೀಕ್ಷೆ-2’ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಆರ್ಥಿಕ ಹೊರೆಯಾಗಬಾರದು ಎಂಬ ಉದ್ದೇಶದಿಂದ ಸರ್ಕಾರವು ಈ ಬಾರಿಯೂ ಪರೀಕ್ಷಾ ಶುಲ್ಕವನ್ನು ಸಂಪೂರ್ಣವಾಗಿ ಭರಿಸುವ ನಿರ್ಧಾರ ಕೈಗೊಂಡಿದೆ. ಹೀಗಾಗಿ ವಿದ್ಯಾರ್ಥಿಗಳು ಉಚಿತವಾಗಿ ನೋಂದಾಯಿಸಿಕೊಂಡು ಪರೀಕ್ಷೆಗೆ ಹಾಜರಾಗಬಹುದು. ಜೊತೆಗೆ ಈಗಾಗಲೇ ತೇರ್ಗಡೆಯಾದ ವಿದ್ಯಾರ್ಥಿಗಳಿಗೂ ತಮ್ಮ ಫಲಿತಾಂಶವನ್ನು ಇನ್ನಷ್ಟು ಉತ್ತಮಪಡಿಸಿಕೊಳ್ಳಲು ‘Improvement’ ಅವಕಾಶವನ್ನು ನೀಡಲಾಗಿದೆ.

ಪರೀಕ್ಷೆ-2ಕ್ಕೆ ನೋಂದಣಿ ಮಾಡಲು ಏಪ್ರಿಲ್ 30 ಕೊನೆಯ ದಿನಾಂಕವಾಗಿದ್ದು, ಯಾವುದೇ ವಿದ್ಯಾರ್ಥಿ ಮಾಹಿತಿಯ ಕೊರತೆಯಿಂದ ಈ ಅವಕಾಶವನ್ನು ತಪ್ಪಿಸಿಕೊಳ್ಳಬಾರದು ಎಂದು ಶಿಕ್ಷಣ ಇಲಾಖೆ ಮನವಿ ಮಾಡಿದೆ.
MUST WATCH : BENGALURU | ರಾಜ್ಯದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ – ಧಗ ಧಗನೇ ಹೊತ್ತಿ ಉರಿದ ಶೆಡ್ ಗಳು..!




