Yadagiri ಜಿಲ್ಲೆಯ ಗುರುಮಠಕಲ್ ತಾಲೂಕಿನ ಬುದುರು ಗ್ರಾಮದಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿವೆ…

Yadagiri ಜಿಲ್ಲೆಯ Gurumatkal ತಾಲೂಕಿನ ಬುದುರು ಗ್ರಾಮದಲ್ಲಿ ಸಿಡಿಲು ಬಡಿದು ಸುಮಾರು 60 ಕುರಿಗಳು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಈ ಘಟನೆ ಸ್ಥಳೀಯ ರೈತರು ಮತ್ತು ಕುರಿಗಾಹಿಗಳಲ್ಲಿ ಆತಂಕ ಮೂಡಿಸಿದೆ.
MUST READ : ಮೇ 15ರೊಳಗೆ ಸಂಪುಟ ಪುನರ್ ರಚನೆ ಸಾಧ್ಯ – MLA Narayanaswamy ಸುಳಿವು ..!!

ಮೃತಪಟ್ಟ ಕುರಿಗಳು ಕುರಿಗಾಹಿಗಳಾದ ಮಲ್ಲಪ್ಪ ಮತ್ತು ಜಲ್ಲಪ್ಪ ಅವರಿಗೆ ಸೇರಿದ್ದವು ಎಂದು ತಿಳಿದುಬಂದಿದೆ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದ ಸಂದರ್ಭದಲ್ಲಿ ಕುರಿಗಳನ್ನು ಮನೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸಿಡಿಲು ಬಡಿದ ಪರಿಣಾಮ ಕ್ಷಣಾರ್ಧದಲ್ಲೇ 60 ಕುರಿಗಳು ಸಾವನ್ನಪ್ಪಿವೆ.
ಈ ಘಟನೆ ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
MUST WATCH : BENGALURU | ರಾಜ್ಯದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ – ಧಗ ಧಗನೇ ಹೊತ್ತಿ ಉರಿದ ಶೆಡ್ ಗಳು..!




