ಮಾರ್ಚ್ 2026ರಲ್ಲಿ KSRTC ರಾಜ್ಯಾದ್ಯಂತ ತಪಾಸಣೆ ನಡೆಸಿ 4,265 ಟಿಕೆಟ್ ರಹಿತ ಪ್ರಯಾಣಿಕರಿಂದ 8 ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಿದೆ.

KSRTC ತನ್ನ ಆದಾಯ ಸೋರಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯಾದ್ಯಂತ ತಪಾಸಣೆ ಕಾರ್ಯವನ್ನು ಚುರುಕುಗೊಳಿಸಿದ್ದು, ಕೇವಲ ಮಾರ್ಚ್ 2026 ತಿಂಗಳಲ್ಲೇ ಸಾವಿರಾರು ಟಿಕೆಟ್ ರಹಿತ ಪ್ರಯಾಣಿಕರಿಂದ ಲಕ್ಷಾಂತರ ರೂಪಾಯಿ ದಂಡ ವಸೂಲಿ ಮಾಡಿದೆ.
MUST READ : Siddaramaiah ಪದತ್ಯಾಗಕ್ಕೂ ಸಿದ್ಧ – KN Rajanna ಹೊಸ ಹೇಳಿಕೆ..!

ಮಾರ್ಚ್ ತಿಂಗಳಲ್ಲಿ ನಿಗಮದ ವಿಶೇಷ ತನಿಖಾ ತಂಡಗಳು ರಾಜ್ಯಾದ್ಯಂತ ಸಂಚರಿಸುವ 42,395 ವಾಹನಗಳನ್ನು ತಪಾಸಣೆಗೊಳಪಡಿಸಿವೆ. ಈ ವೇಳೆ ಒಟ್ಟು 4,260ಕ್ಕೂ ಹೆಚ್ಚು ಪ್ರಕರಣಗಳನ್ನು ಪತ್ತೆಹಚ್ಚಲಾಗಿದ್ದು, ನಿಯಮ ಮೀರಿ ಸಂಚರಿಸುತ್ತಿದ್ದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ತಪಾಸಣೆಯ ವೇಳೆ ಸಿಕ್ಕಿಬಿದ್ದ 4,265 ಟಿಕೆಟ್ ರಹಿತ ಪ್ರಯಾಣಿಕರಿಂದ ನಿಗಮವು ಒಟ್ಟು 8,16,375 ರೂಪಾಯಿ ದಂಡವನ್ನು ವಸೂಲಿ ಮಾಡಿದೆ. ಇದರೊಂದಿಗೆ ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ ಸುಮಾರು 1,21,633 ರೂಪಾಯಿ ಹಣವನ್ನು ತನಿಖಾಧಿಕಾರಿಗಳು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ.

ಈ ಸಂದರ್ಭದಲ್ಲಿ ಕೇವಲ ಪ್ರಯಾಣಿಕರಷ್ಟೇ ಅಲ್ಲದೆ, ಕರ್ತವ್ಯ ಲೋಪ ಎಸಗಿದ ಹಾಗೂ ಆದಾಯ ಸೋರಿಕೆಗೆ ಕಾರಣರಾದ ಸಂಬಂಧಪಟ್ಟ ಸಿಬ್ಬಂದಿಗಳ ವಿರುದ್ಧವೂ ನಿಗಮವು ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮಗಳನ್ನು ಜರುಗಿಸಿದೆ.
ಬಸ್ಸಿನಲ್ಲಿ ಪ್ರಯಾಣಿಸುವ ಸಾರ್ವಜನಿಕರು ಕಡ್ಡಾಯವಾಗಿ ಸರಿಯಾದ ಟಿಕೆಟ್ ಅಥವಾ ಪಾಸ್ಗಳನ್ನು ಪಡೆದುಕೊಂಡೇ ಪ್ರಯಾಣಿಸಬೇಕು. ಟಿಕೆಟ್ ರಹಿತ ಪ್ರಯಾಣ ಅಪರಾಧವಾಗಿದ್ದು, ಮುಜುಗರ ಮತ್ತು ದಂಡವನ್ನು ತಪ್ಪಿಸಲು ಸಹಕರಿಸಬೇಕು ಎಂದು ಕೆಎಸ್ಆರ್ಟಿಸಿ ಮನವಿ ಮಾಡಿದೆ.
MUST WATCH : BENGALURU | ರಾಜ್ಯದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ – ಧಗ ಧಗನೇ ಹೊತ್ತಿ ಉರಿದ ಶೆಡ್ ಗಳು..!




