Karnataka Weather : ಕರ್ನಾಟಕದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Karnataka Weather : ರಾಜ್ಯದಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಇಂದು (ಏ.29) ಬೆಂಗಳೂರು ಸೇರಿ ಒಟ್ಟು 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
MUST READ : ಬೆಂಗಳೂರು ಪಿಯುಸಿ ವಿದ್ಯಾರ್ಥಿನಿಯರ ಮಿಸ್ಸಿಂಗ್ ಕೇಸ್ ಈಗ CIDಗೆ

ಇನ್ನು ನಾಳೆ (ಏ.30) ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 1ರಂದು ರಾಯಚೂರು, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ತುಮಕೂರು, ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಸೇರಿ ಒಟ್ಟು 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅದೇ ರೀತಿ ಮೇ 2ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಅವಧಿಯಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
MUST WATCH : ಬೆಡ್ ರೂಂನಲ್ಲಿ ಕಂತೆ ಕಂತೆ ಲಂಚದ ಹಣ – PDO ಲಂಚ ಪಡೆಯುವ VIDEO VIRAL | CHIKKABALLAPURA NEWS |




