ಉದ್ಯೋಗ ಖಾತ್ರಿ ಕೆಲಸಕ್ಕೆ ತೆರಳಿದ್ದ ವೇಳೆ ಕೂಲಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ Sindhanur ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

ಘಟನೆ ವಿವರ
ಉದ್ಯೋಗ ಖಾತ್ರಿ ಕೆಲಸಕ್ಕೆ ತೆರಳಿದ್ದ ವೇಳೆ ಕೂಲಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ Sindhanur ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಅಂಬಣ್ಣ (65) ಎಂದು ಗುರುತಿಸಲಾಗಿದ್ದು, ಅವರು ನರೆಗಾ ಯೋಜನೆಯಡಿ ಕೆಲಸ ಮಾಡುತ್ತಿದ್ದರು. ಕೆಲಸ ಮಾಡುವಾಗ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲದಿದ್ದರೂ, ಬಿರು ಬಿಸಿಲಿನ ತಾಪಮಾನದಿಂದ ಸುಸ್ತಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
MUST READ : Pre wedding ಶೂಟ್ಗೆ ಹೋಗುವಾಗ ಅಪಘಾತ – ವರನ ಸಾವು..!!

ಈ ಘಟನೆ ರಾಯಚೂರು ಜಿಲ್ಲೆಯಲ್ಲಿಯೇ ಎರಡನೇ ಪ್ರಕರಣವಾಗಿದ್ದು, ಇದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸ ಮಾಡುವ ವೇಳೆ ಸಾವನ್ನಪ್ಪಿರುವುದರಿಂದ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಹಾಗೂ ಕಾರ್ಮಿಕರು ಆಗ್ರಹಿಸಿದ್ದಾರೆ. ಘಟನೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
MUST WATCH : ಬಿರುಗಾಳಿ ಸಹಿತ ಆಲಿಕಲ್ಲು RAIN – ಧರೆಗೆ ಉರುಳಿದ ಸಾಲು ಸಾಲು ಮರಗಳು..! | BENGALURU NEWS |




