Dhurandhar ಚಿತ್ರತಂಡಕ್ಕೆ ಬಿಗ್ ರಿಲೀಫ್ – ಸೆನ್ಸಾರ್ ಪ್ರಮಾಣಪತ್ರ ರದ್ದು ಕೋರಿದ್ದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

ಕಥೆ ಕದ್ದ ಆರೋಪ ಪ್ರಕರಣದಲ್ಲಿ ‘ಧುರಂಧರ್’ ಚಿತ್ರತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಚಿತ್ರದ ಸೆನ್ಸಾರ್ ಪ್ರಮಾಣಪತ್ರ ರದ್ದುಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಅರ್ಜಿ ವಜಾ
ನಿರ್ಮಾಪಕ ಸಂತೋಷ್ ಕುಮಾರ್ ಅವರು, ನಿರ್ದೇಶಕ ಆದಿತ್ಯ ಧರ್ ತಮ್ಮ ‘ಡಿ-ಸಾಹೇಬ್’ ಚಿತ್ರದ ಕಥಾವಸ್ತುವನ್ನು ಕದ್ದಿದ್ದಾರೆ ಎಂದು ಆರೋಪಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ಏಕಸದಸ್ಯ ಪೀಠವು ಈ ದೂರಿನಲ್ಲಿ ಯಾವುದೇ ಸಾರಾಂಶವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ.
READ THIS : ಮಹಿಳೆಯರ ಅಶ್ಲೀಲ ವಿಡಿಯೋ ಇಟ್ಕೊಂಡು ಬ್ಲಾಕ್ಮೇಲ್ – ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್!

ಯಾವುದೇ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದಿಲ್ಲ
ಇನ್ನೊಂದೆಡೆ ಇದೇ ವಿವಾದಕ್ಕೆ ಸಂಬಂಧಿಸಿ ಮುಂಬೈ ಹೈಕೋರ್ಟ್ನಲ್ಲೂ ವಿಚಾರಣೆ ನಡೆಯುತ್ತಿದೆ. ಆದಿತ್ಯ ಧರ್ ಅವರು ಸಂತೋಷ್ ಕುಮಾರ್ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ, ಪ್ರಕರಣ ಬಾಕಿ ಇರುವವರೆಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಸಂತೋಷ್ ಕುಮಾರ್ ಭರವಸೆ ನೀಡಿದ್ದಾರೆ. ಆದರೆ ಆದಿತ್ಯ ಧರ್ ಅವರನ್ನು ‘ಚೋರ್’ ಎಂದು ಕರೆದಿದ್ದಕ್ಕಾಗಿ ಕ್ಷಮೆಯಾಚಿಸಲು ಸಂತೋಷ್ ಕುಮಾರ್ ಅವರ ಕಾನೂನು ತಂಡ ನಿರಾಕರಿಸಿದೆ. ತಮ್ಮ ಕಕ್ಷಿದಾರರು ತಮ್ಮ ಆರೋಪದಲ್ಲಿ ನಂಬಿಕೆ ಹೊಂದಿದ್ದಾರೆ ಎಂದು ತಿಳಿಸಿದೆ.

Dhurandhar – ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು
ಈ ವಿವಾದವು ರಣವೀರ್ ಸಿಂಗ್ ಅಭಿನಯದ ‘Dhurandhar’ ಮತ್ತು ಅದರ ಮುಂದುವರಿದ ಭಾಗ ‘ಧುರಂಧರ್ 2’ ಚಿತ್ರದ ಕಥೆಗೆ ಸಂಬಂಧಿಸಿದೆ. ಈ ಚಿತ್ರಗಳು ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಕಂಡು ಸಾವಿರ ಕೋಟಿಗೂ ಅಧಿಕ ಕಲೆಕ್ಷನ್ ಗಳಿಸಿವೆ.
MUST WATCH : ಆನೆ ಹೋಗ್ತಾ ಇದ್ರೆ ನಾಯಿ ಬೊಗಳುತ್ತೆ – YADIYURAPPAರನ್ನ ಹೊಗಳಿದ SURESH GOWDA





