Accident : ಲಾರಿಗೆ ಕಾರು ಡಿಕ್ಕಿ – ಜವರಾಯನ ಅಟ್ಟಹಾಸಕ್ಕೆ ಕುಣಿಗಲ್ ಬಳಿ ದಾರಿಯಲ್ಲೇ ಪ್ರಾಣಬಿಟ್ಟ ನಾಲ್ವರು

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಭೀಕರ ರಸ್ತೆ Accident ಸಂಭವಿಸಿದ್ದು, ಗೊಬ್ಬರ ತುಂಬಿದ್ದ ಲಾರಿಗೆ ಆಲ್ಟೋ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
READ THIS : ಪ್ರಧಾನಿ ಮೋದಿ ಬೆಂಗಳೂರಿಗೆ – ನಾಳೆ ಈ ರಸ್ತೆಗಳೆಲ್ಲಾ ಬಂದ್!

ನಾಲ್ವರು ದಾರುಣ ಸಾವು
ವೇಗವಾಗಿ ಬರುತ್ತಿದ್ದ ಆಲ್ಟೋ ಕಾರು ಎದುರಿನಿಂದ ಬರುತ್ತಿದ್ದ ಗೊಬ್ಬರದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರ ಗುರುತು ಪತ್ತೆಯಾಗಿಲ್ಲ
ಇನ್ನು ವಿಷಯ ತಿಳಿಯುತ್ತಿದ್ದಂತಯೇ ಕುಣಿಗಲ್ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತರ ಗುರುತು ಇನ್ನು ಪತ್ತೆಯಾಗಿಲ್ಲ.

MUST WATCH : ಜನತಾದರ್ಶನ ಕಾರ್ಯಕ್ರಮದಲ್ಲಿ GOWRISHANKAR ಗರಂ – 15 ದಿನಗಳೊಳಗೆ ಸಮಸ್ಯೆ ಬಗೆಹರಿಸುವಂತೆ ಸೂಚನೆ..!




