ಕಾಂಗ್ರೆಸ್ ಸರ್ಕಾರದ ಸಚಿವ D Sudhakar ವಿಧಿವಶ – ನಾಯಕನ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

ಕಾಂಗ್ರೆಸ್ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ವಿಧಿವಶರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಸಚಿವ ಸುಧಾಕರ್ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದು, ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಇಂದು ಮುಂಜಾನೆ ಮೂರು ಗಂಟೆ ಹದಿನೈದು ನಿಮಿಷದ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನಹೊಂದಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಸುಧಾಕರ್ ನಿಧನ
ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದ ಸುಧಾಕರ್ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಒಂದು ತಿಂಗಳಿನಿಂದ ಐಸಿಯುನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಕೊನೆಯುಸಿರೆಳೆದಿದ್ದಾರೆ.
READ THIS : ಗೊಬ್ಬರ ತುಂಬಿದ ಲಾರಿಗೆ ಕಾರು ಡಿಕ್ಕಿ – ನಾಲ್ವರು ಸಾವು

D Sudhakar ರಾಜಕೀಯ ಹಾದಿ
ಕಾಂಗ್ರೆಸ್ ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿ ಡಿ.ಸುಧಾಕರ್ ಅವರು ಗುರುತಿಸಿಕೊಂಡಿದ್ದರು. ಕೃಷಿ ಹಾಗೂ ಲಿಕ್ಕರ್ ಉದ್ಯಮದಲ್ಲಿ ದುಡಿಯುತ್ತಿದ್ದ ಸುಧಾಕರ್ ಬಳಿಕ ರಾಜಕೀಯ ರಂಗ ಪ್ರವೇಶಿಸಿದ್ರು. ಮಾಜಿ ಶಾಸಕ ಎನ್. ಜಯಣ್ಣ ಅವರಿಂದ ರಾಜಕೀಯ ಕಲಿತ ಸುಧಾಕರ್, ಹಂತ ಹಂತವಾಗಿ ಬೆಳೆದು ಚಿತ್ರದುರ್ಗ ಜಿಲ್ಲೆಯ ಪ್ರಭಾವಿ ನಾಯಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿ ಗುರುತಿಸಿಕೊಂಡಿದ್ದರು. ಸಚಿವರಾಗಿದ್ದರು ಕೂಡ ಎಂದಿಗೂ ತಮ್ಮ ಸರಳತೆಯನ್ನು ಬಿಟ್ಟಿರಲಿಲ್ಲ.

ನಾಯಕನ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು
ವೈಯಕ್ತಿಕ ಜೀವನದಲ್ಲಿ ಸರಳ ವ್ಯಕ್ತಿತ್ವದಿಂದಲೇ ಗುರುತಿಸಿಕೊಂಡಿರೋ D Sudhakar ಅವರು ಪತ್ನಿ ಹರ್ಷಿಣಿ, ಮಗ ಸುಹಾಸ್ ಹಾಗೂ ಪುತ್ರಿ ಸ್ಫೂರ್ತಿ ಅವರನ್ನು ಅಗಲಿದ್ದಾರೆ. ಇನ್ನು ಸಚಿವರ ಅಕಾಲಿಕ ಮರಣದಿಂದ ಚಿತ್ರದುರ್ಗ ಜಿಲ್ಲೆಯಾದ್ಯಂತ ಶೋಕದ ಛಾಯೆ ಆವರಿಸಿದೆ. ಸಚಿವ ಸುಧಾಕರ್ ನಿಧನಕ್ಕೆ ಅಪಾರ ಅಭಿಮಾನಿಗಳು ಹಾಗೂ ಹಲವು ಮಂದಿ ರಾಜ್ಯದ ಗಣ್ಯರು ಕಂಬನಿ ಮಿಡಿದಿದ್ದಾರೆ. ಸಚಿವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

MUST WATCH : BSY ಅವರ ಹೋರಾಟ ಹೇಗಿತ್ತು? – KOTA SRINIVAS POOJARY ಏನಂದ್ರು




