ಪ್ರಧಾನಿ Modi ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ – ತನಿಖೆಗೆ ವಿಶೇಷ ಪೊಲೀಸ್ ತಂಡ ರಚನೆ

ಪ್ರಧಾನಿ ನರೇಂದ್ರ ಮೋದಿ (Modi) ಅವರು ಬೆಂಗಳೂರಿನಲ್ಲಿ ಸಂಚರಿಸಬೇಕಿದ್ದ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಘಟನೆ ಭದ್ರತಾ ವಲಯದಲ್ಲಿ ಆತಂಕ ಮೂಡಿಸಿದೆ. ಘಟನೆ ಕಗ್ಗಲೀಪುರ ಬಳಿಯ ತಾತಗುಣಿ ಸಮೀಪದ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ರಸ್ತೆ ಬಳಿ 2 ಜಿಲೆಟಿನ್ ಕಡ್ಡಿಗಳು ಪತ್ತೆ..!
ಆರ್ಟ್ ಆಫ್ ಲಿವಿಂಗ್ ಆಶ್ರಮದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಬ್ರಿಡ್ಜ್ ಪಕ್ಕದ ಕಾಂಪೌಂಡ್ ಬಳಿ ಕಲ್ಲು ಕ್ವಾರಿಗಳಲ್ಲಿ ಬಳಸುವ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಸ್ಥಳೀಯರು ಅನುಮಾನಾಸ್ಪದ ವಸ್ತುಗಳನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಭದ್ರತಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

READ THIS : ಸಚಿವ ಡಿ. ಸುಧಾಕರ್ ನಿಧನ – ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಣೆ
ಯಾವುದೇ ಅನಾಹುತ ಸಂಭವಿಸಿಲ್ಲ
ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾದ ಜಿಲೆಟಿನ್ ಕಡ್ಡಿಗಳು ಸಕ್ರಿಯ ಸ್ಥಿತಿಯಲ್ಲಿ ಇರಲಿಲ್ಲ ಎಂಬುದಾಗಿ ತಿಳಿದುಬಂದಿದೆ. ಇದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಆದಾಗ್ಯೂ, ಪ್ರಧಾನಿ ಭೇಟಿಯ ಹಿನ್ನೆಲೆ ಈ ಘಟನೆ ಭದ್ರತಾ ದೃಷ್ಟಿಯಿಂದ ಗಂಭೀರವಾಗಿ ಪರಿಗಣಿಸಲಾಗಿದೆ.
ಹಿರಿಯ ಅಧಿಕಾರಿಗಳ ಭೇಟಿ
ಇನ್ನು ಘಟನೆಯ ಮಾಹಿತಿ ತಿಳಿದ ಬಳಿಕ ಕೇಂದ್ರ ವಿಭಾಗದ ಡಿಐಜಿ ಗಿರೀಶ್ ಅವರು ಕಗ್ಗಲೀಪುರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್ಪಿ ಶ್ರೀನಿವಾಸ್ ಗೌಡ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ಸಿಸಿಟಿವಿ ಪರಿಶೀಲನೆ
ಜಿಲೆಟಿನ್ ಕಡ್ಡಿಗಳನ್ನು ಯಾರಾದರೂ ಉದ್ದೇಶಪೂರ್ವಕವಾಗಿ ಅಲ್ಲಿ ಬಿಟ್ಟುಹೋಗಿದ್ದಾರೆಯೇ ಅಥವಾ ಹಿಂದಿನಿಂದಲೇ ಅಲ್ಲಿದ್ದವೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಶಂಕಿತರ ಪತ್ತೆಗೆ ಹುಡುಕಾಟ ನಡೆಸಲಾಗ್ತಿದೆ.
MUST WATCH : ಬರದ ನಾಡಿನಲ್ಲಿ ಕಾಶ್ಮೀರಿ ಆಪಲ್ – ಆಪಲ್ ಬೆಳೆದು ಸೈ ಎನಿಸಿಕೊಂಡ ಯುವ ರೈತ




