Bengaluru : ನಾಳೆ ನಡೆಯಬೇಕಿದ್ದ ನೂತನ ವಿಧಾನಸಭಾ ಸದಸ್ಯರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಮುಂದೂಡಿಕೆ

Bengaluru : ನೂತನವಾಗಿ ಆಯ್ಕೆಯಾಗಿರುವ ವಿಧಾನಸಭಾ ಸದಸ್ಯರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

READ THIS : ಮೋದಿ ಭೇಟಿ ವೇಳೆ ಭದ್ರತಾ ಲೋಪ? ಸ್ಫೋಟಕ ವಸ್ತು ಪತ್ತೆ!
ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಮುಂದೂಡಿಕೆ
ಹೆಚ್.ವೈ. ಮೇಟಿ ಹಾಗೂ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ಕ್ಷೇತ್ರಗಳಿಂದ ಕ್ರಮವಾಗಿ ಉಮೇಶ್ ಹುಲ್ಲಪ್ಪ ಮೇಟಿ ಹಾಗೂ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಆಯ್ಕೆಯಾಗಿದ್ದರು. ಇವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ಮೇ 11ರಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 334ರಲ್ಲಿ ನಡೆಸಲು ನಿಗದಿಪಡಿಸಲಾಗಿತ್ತು.

ವಿಧಾನಸಭೆ ಕಚೇರಿ ಪ್ರಕಟಣೆಯಲ್ಲೇನಿದೆ?
ಆದರೆ ಪ್ರಮಾಣವಚನ ಕಾರ್ಯಕ್ರಮವನ್ನ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರ ನಿಧನದ ಕಾರಣ ಮುಂದೂಡಲಾಗಿದೆ ಎಂದು ವಿಧಾನಸಭೆಯ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
MUST WATCH : ಕೆರೆ ಮಣ್ಣು ಅಕ್ರಮ ಸಾಗಾಟ ಕೇಸ್ – ಇಬ್ಬರು ENGINEERಗಳು SUSPEND.!




