RRB Recruitment : ಭಾರತೀಯ ರೈಲ್ವೆ ನೇಮಕಾತಿ ಮಂಡಳಿ 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಭರ್ಜರಿ ನೇಮಕಾತಿ ಅಧಿಸೂಚನೆ ಹೊರಡಿಸಿದೆ.

RRB Recruitment : ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಪಡೆಯಲು ಕನಸು ಕಾಣುತ್ತಿರುವ ಯುವಕರಿಗೆ ರೈಲ್ವೆ ನೇಮಕಾತಿ ಮಂಡಳಿ (RRB) ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. 2026ನೇ ಸಾಲಿನ ನೇಮಕಾತಿ ಪ್ರಕ್ರಿಯೆಯ ಭಾಗವಾಗಿ ದೇಶಾದ್ಯಂತ ಒಟ್ಟು 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ತಾಂತ್ರಿಕ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.
ಮೇ 15ರಿಂದ ಅರ್ಜಿ ಪ್ರಕ್ರಿಯೆ ಆರಂಭ
ರೈಲ್ವೆ ಮಂಡಳಿಯ ಪ್ರಕಟಣೆಯ ತಿಳಿಸದಂತೆ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮೇ 15ರಿಂದ ಆರಂಭವಾಗಲಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 14ರವರೆಗೆ ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ
ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ (SSLC) ಉತ್ತೀರ್ಣರಾಗಿರಬೇಕು. ಜೊತೆಗೆ ಫಿಟ್ಟರ್, ಎಲೆಕ್ಟ್ರಿಷಿಯನ್, ಮೆಕ್ಯಾನಿಕ್ ಸೇರಿದಂತೆ ಸಂಬಂಧಿತ ಟ್ರೇಡ್ಗಳಲ್ಲಿ ITI ಪೂರೈಸಿರಬೇಕು. ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಅಥವಾ ಆಟೋಮೊಬೈಲ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಅಥವಾ B.E/B.Tech ಪದವಿ ಪಡೆದವರೂ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ವಯೋಮಿತಿ
ಅಭ್ಯರ್ಥಿಗಳ ವಯಸ್ಸು 18ರಿಂದ 30 ವರ್ಷಗಳೊಳಗಿರಬೇಕು. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ದೊರೆಯಲಿದೆ.
READ THIS : ನೂತನ ವಿಧಾನಸಭಾ ಸದಸ್ಯರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಮುಂದೂಡಿಕೆ
ಆಯ್ಕೆ ಪ್ರಕ್ರಿಯೆ ಹೇಗೆ?
ಸಹಾಯಕ ಲೋಕೋ ಪೈಲಟ್ ಹುದ್ದೆಗೆ ಅಭ್ಯರ್ಥಿಗಳನ್ನು ಹಲವು ಹಂತಗಳಲ್ಲಿ ಆಯ್ಕೆ ಮಾಡಲಾಗುತ್ತದೆ. ಮೊದಲಿಗೆ CBT-1 ಮತ್ತು CBT-2 ಎಂಬ ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು ನಡೆಯಲಿವೆ. ಬಳಿಕ ಮಾನಸಿಕ ಸಾಮರ್ಥ್ಯ ಪರೀಕ್ಷೆ (CBAT) ನಡೆಯುತ್ತದೆ. ನಂತರ ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಲೋಕೋ ಪೈಲಟ್ ಹುದ್ದೆಗೆ ದೃಷ್ಟಿ ಸಾಮರ್ಥ್ಯ ‘A-1’ ಗುಣಮಟ್ಟದಲ್ಲಿರುವುದು ಕಡ್ಡಾಯವಾಗಿದೆ.
ವೇತನ ಮತ್ತು ಸೌಲಭ್ಯಗಳು
ಇನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕವಾಗಿ ರೂ.19,900 ಮೂಲ ವೇತನ ನೀಡಲಾಗುತ್ತದೆ. ಇದರೊಂದಿಗೆ DA, HRA ಹಾಗೂ ರನ್ನಿಂಗ್ ಅಲವನ್ಸ್ ಸೇರಿ ಮಾಸಿಕ ರೂ.35,000 ರಿಂದ ರೂ.45,000 ವರೆಗೆ ವೇತನ ದೊರೆಯಲಿದೆ. ಜೊತೆಗೆ ರೈಲ್ವೆ ಇಲಾಖೆಯ ವೈದ್ಯಕೀಯ ಮತ್ತು ಪ್ರಯಾಣ ಸೌಲಭ್ಯಗಳೂ ಲಭ್ಯವಾಗಲಿವೆ.
ಅರ್ಜಿ ಸಲ್ಲಿಸುವು ಹೇಗೆ?
ಅರ್ಹ ಅಭ್ಯರ್ಥಿಗಳು ಆಯಾ ವಲಯದ ಅಧಿಕೃತ ರೈಲ್ವೆ ನೇಮಕಾತಿ ಮಂಡಳಿಯ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
MUST WATCH : ಇವತ್ತಿಂದ ತಮಿಳುನಾಡಿನಲ್ಲಿ ದಳಪತಿ ಅಬ್ಬರ- ಪಟ್ಟಾಭಿಷೇಕದ ವೇಳೆ ಅಭಿಮಾನಿಗಳ ಜೈಕಾರ..!




