Actor Yeshwanth saradeshpande :ಕನ್ನಡ ರಂಗಭೂಮಿಗೆ ನೂರುಕ್ಕೂ ಹೆಚ್ಚು ನಾಟಕಗಳ ಮೂಲಕ ಅಮೂಲ್ಯ ಕೊಡುಗೆ ನೀಡಿದ ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ (60) ಇಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇದು ಬೆಳಿಗ್ಗೆ ಸುಮಾರು 10 ಗಂಟೆಯ ಸುಮಾರಿಗೆ ಅವರಿಗೆ ತೀವ್ರ ಎದೆ ನೋವು ಕಾಣಿಸಿ ಕೊಂಡಿದ್ದು, ತಕ್ಷಣವೇ ಅವರನ್ನು ನಗರದ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನಾಟಕ, ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ತಮ್ಮ ವಿಭಿನ್ನ ಅಭಿನಯ ಶೈಲಿಯಿಂದ ಪ್ರೇಕ್ಷಕರ ಮನಗೆದ್ದ ಯಶವಂತ ಸರದೇಶಪಾಂಡೆ, ಯುವ ಕಲಾವಿದರಿಗೆ ಮಾರ್ಗದರ್ಶಕರಾ ಗಿಯೂ ಕಾರ್ಯನಿರ್ವಹಿಸಿದ್ದರು. ಅವರ ನಿಧನಕ್ಕೆ ಕರ್ನಾಟಕದ ವಿವಿಧ ಕಲಾ ವಲಯಗಳಿಂ ದ ಸಂತಾಪ ವ್ಯಕ್ತವಾಗಿದೆ.
ಇನ್ನು ಹಿರಿಯ ನಟ ಅನಂತ್ ನಾಗ್, ನಿರ್ದೇಶಕ ಗಿರೀಶ ಕಾಸರವಳ್ಳಿ ಸೇರಿದಂತೆ ಹಲವಾರು ಗಣ್ಯರು ಯಶವಂತ ದೇಶಪಾಂಡೆ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.