
ಇಂದು ಅರಸೀಕೆರೆ ನಗರದ ಶ್ರೀ ವಿಶ್ವಕರ್ಮ ಸಮುದಾಯ ಭವನದಲ್ಲಿ ಅರಸೀಕೆರೆ ತಾಲೂಕು ವಿಶ್ವಕರ್ಮ ಸಮಾಜ, ಶ್ರೀ ಕಾಳಿಕಾಂಬ ಅಬ್ಯುದಯ ಸಹಕಾರ ಸಂಘ ನಿ.ವಾರ್ಷಿಕ ಮಹಾಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಭಗವಾನ್ ವಿಶ್ವಕರ್ಮ ಮಹೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು.
ತಾಲೂಕು ಮಟ್ಟದ ಶ್ರೀ ಭಗವಾನ್ ವಿಶ್ವಕರ್ಮ ಮಹೋತ್ಸವದಲ್ಲಿ ಶ್ರೀ ಮ.ನಿ.ಪ್ರ.ಸ್ವ ಶ್ರೀ ಡಾll ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ. ಸುಕ್ಷೇತ್ರ ಕೋಡಿಮಠ ಮಹಾಸಂಸ್ಥಾನ ಹಾರನಹಳ್ಳಿ, ಪರಮಪೂಜ್ಯ ಅನಂತ ಶ್ರೀ ವಿಭೂಷಿತ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿ. ಶ್ರೀ ವಿಶ್ವಕರ್ಮ ಜಗದ್ಗುರು ಪೀಠ ಅರಕಲಗೂಡು, ಪರಮಪೂಜ್ಯ ಅಷ್ಟೊತ್ತರ ಶತ ಶ್ರೀ ಶಂಕರಾನಂದ ಸರಸ್ವತಿ ಮಹಾಸ್ವಾಮಿಗಳು, ಶ್ರೀಮದ್ ಜಗದ್ಗುರು ವಿಶ್ವಕರ್ಮ ಮಹಾ ಸಂಸ್ಥಾನ ಸಾವಿತ್ರಿಪೀಠ ಕಾಶಿಮಠ ವಡ್ಡನಹಾಳ್ ಚನ್ನಗಿರಿ ತಾಲೂಕು ಇವರುಗಳು ದಿವ್ಯ ಸಾನಿದ್ಯದಲ್ಲಿ ಕರ್ನಾಟಕ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಅರಸೀಕೆರೆ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ ಎಂ ಶಿವಲಿಂಗೇಗೌಡ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಕಾರ್ಯಕ್ರಮವನ್ನು ಹಾಗೂ ನೆರೆದಿದ್ದ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿದರು.
ಶಾಸಕ ಈ ಕಾರ್ಯಕ್ರಮದಲ್ಲಿ ಅರಸೀಕೆರೆ ತಹಸೀಲ್ದಾರ್ ಎಂ ಜಿ ಸಂತೋಷ್ ಕುಮಾರ್, ಅರಸೀಕೆರೆ ನಗರಸಭೆ ಅಧ್ಯಕ್ಷರಾದ ಎಂ ಸಮೀವುಲ್ಲಾ, ಅರಸೀಕೆರೆ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಅರುಣ್ ಕುಮಾರ್, ಅರಸೀಕೆರೆ ಪೊಲೀಸ್ ಉಪ ವಿಭಾಗದ ಉಪಾಧೀಕ್ಷಕರಾದ ಬಿ ಆರ್ ಗೋಪಿ, ನಗರಸಭೆ ಉಪಾಧ್ಯಕ್ಷರಾದ ಮನೋಹರ್ ಮೇಸ್ತ್ರಿ, ಇತರರು ಹಾಜರಿದ್ರು




