
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸವಾರರು ಮೃತಪಟ್ಟರೆ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿರುವ ಘಟನೆ ಶಿರಾ ನಗರದ ಹೊರವಲಯದ ಬೈಪಾಸ್ ರಸ್ತೆಯ ಸಾಯಿಡಾಬಾ ಬಳಿ ನಡೆದಿದೆ.
ಮೃತರನ್ನು ಶಿರಾ ತಾಲೂಕಿನ ಎಮ್ಮೆರಹಳ್ಳಿ ನಿವಾಸಿ ವಿಷ್ಣುನಾಯ್ಕ್ ಹಾಗೂ ಶಿರಾದಲ್ಲಿ ವ್ಯಾಪಾರಕ್ಕೆಂದು ಬಂದಿದ್ದ ಕನಕಪುರ ಮೂಲದ ಮುತ್ತುರಾಜ್ ಮತ್ತು ವೆಂಕಟಮಾದ ಶೆಟ್ಟಿ ಎಂದು ಗುರುತಿಸಲಾಗಿದೆ. ತಾಲೂಕಿನ ಹಳೆ ಹೆದ್ದಾರಿಯಲ್ಲಿರುವ ಸಾಯಿಡಾಬಾ ಬಳಿ ಹೊಂಡಾ ಆಕ್ಟಿವಾ ಹಾಗೂ ಇನ್ನೋಂದು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ರೆ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.
ಇನ್ನು ವಿಷಯ ತಿಳಿದ ಕೂಡಲೇ ಶಿರಾ ನಗರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

