
ರಾಜ್ಯದಲ್ಲಿ ಜಾರಿಗೆ ತಂದಿರುವ ಒಳ ಮೀಸಲಾತಿಯಲ್ಲಿ ಅಲೆಮಾರಿ ಜನಾಂಗದವರಿಗೆ ಮೋಸವಾಗುತ್ತಿದೆ ಎಂದು ಲಂಬಾಣಿ ಸಮುದಾಯದ ನೂರಾರು ಜನರು ಚಿತ್ರದುರ್ಗದಲ್ಲಿ ಭಾರಿ ಪಾದಯಾತ್ರೆ ನಡೆಸಿದರು. ಮದಕರಿಪುರ ಗ್ರಾಮದಿಂದ ಆರಂಭವಾದ ಈ ಪಾದಯಾತ್ರೆ ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯವರೆಗೆ ನಡೆಯಿತು.
ಪಾದಯಾತ್ರೆಯಲ್ಲಿ ಸೇವಾಲಾಲ್ ಸ್ವಾಮೀಜಿ ಹಾಗೂ ಮಾಜಿ ಶಾಸಕ ಪಿ.ರಾಜೀವ್ ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಜಾರಿಗೆ ತಂದಿರುವ ಹೊಸ ಮೀಸಲಾತಿ ನೀತಿಯಲ್ಲಿ ಲಂಬಾಣಿ ಸಮುದಾಯದ ವಿರುದ್ಧ ತಾರತಮ್ಯ ಮಾಡಲಾಗಿದೆ ಎಂದರು ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿ, “ಈ ತಾರತಮ್ಯಪೂರ್ಣ ಒಳ ಮೀಸಲಾತಿ ನೀತಿಯನ್ನು ತಕ್ಷಣ ಹಿಂಪಡೆಯಬೇಕು, ಇಲ್ಲದಿದ್ದರೆ ಇನ್ನೂ ಭಾರೀ ಹೋರಾಟಗಳನ್ನು ಎದುರಿಸಬೇಕಾಗುತ್ತದೆ,” ಎಂದು ಎಚ್ಚರಿಕೆ ನೀಡಿದರು.




