
Explosion at home : ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ಸಂಭವಿಸಿದ ನಿಗೂಢ ಸ್ಫೋಟದಿಂದ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ನೆನ್ನೆ ಸಂಜೆ ನಡೆದಿದೆ. ಗಾಯಗೊಂಡ ದಂಪತಿಯನ್ನು ಸುದರ್ಶನ್ ಆಚಾರ್ (32) ಮತ್ತು ಅವರ ಪತ್ನಿ ಕಾವ್ಯ (27) ಎಂದು ಗುರುತಿಸಲಾಗಿದೆ.

ಸ್ಫೋಟದಿಂದ ಗಂಭೀರವಾಗಿ ಗಾಯಗೊಂಡಿರುವ ಈ ದಂಪತಿಯನ್ನು ಸ್ಥಳೀಯರು ತಕ್ಷಣವೇ HMIS ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ZERO TRAFIC ವ್ಯವಸ್ಥೆ ಯೊಂದಿಗೆ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಇನ್ನು ಈ ಘಟನೆ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಫೋಟದ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ನಿಖರ ಮಾಹಿತಿ ಸಂಗ್ರಹಿಸುತ್ತಿದ್ದು, ಪ್ರಾಥಮಿಕ ತನಿಖೆ ಪ್ರಾರಂಭಿಸಲಾಗಿದೆ.




