
Karnataka Rain Alert : ಇಂದು ರಾಜ್ಯದ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಟ್ಟದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳ ಜೊತೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯೂ ಇದೆ. ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 20°C ಆಗುವ ಸಾಧ್ಯತೆ ಇದೆ.




