
BANGALORE : ಚಿತ್ರಮಂದಿರಗಳಲ್ಲಿ ಪ್ರದರ್ಶಿತವಾಗುವ ಎಲ್ಲ ಭಾಷೆಯ ಚಲನಚಿತ್ರಗಳಿಗೆ ಗರಿಷ್ಠ ₹200ರ ಏಕರೂಪದ ಟಿಕೆಟ್ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿ ಮಾಡಿದ ‘ಕರ್ನಾಟಕ ಸಿನಿಮಾ ನಿಯಂತ್ರಣ (ತಿದ್ದುಪಡಿ) ನಿಯಮಗಳು – 2025’ಅಡಿಯಲ್ಲಿ ನಿಯಮ 55(6) ರ ಅನುಸಾರ ಹೈಕೋರ್ಟ್ ಏಕ ಸದಸ್ಯ ಪೀಠ ನೀಡಿದ್ದ ತಾತ್ಕಾಲಿಕ ತಡೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ದ್ವಿಸದಸ್ಯ ಪೀಠದ ಮುಂದೆ ನಡೆಯಲಿದೆ.
ಇದಕ್ಕೂ ಮುಂಚೆ, ಸೆಪ್ಟೆಂಬರ್ 23ರಂದು ಹೈಕೋರ್ಟ್ನ ಏಕ ಸದಸ್ಯ ನ್ಯಾಯಪೀಠ ಈ ನಿಯಮಗಳ ಜಾರಿಗೆ ತಾತ್ಕಾಲಿಕ ತಡೆ ನೀಡಿಲಾಗಿದೆ. ಈ ತಡೆಯನ್ನು ತೆರವುಗೊಳಿಸುವಂತೆ ಮನವಿ ಮಾಡಿಕೊಂಡು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕನ್ನಡ ಸಿನಿಮಾ ನಿರ್ಮಾಪಕರ ಸಂಘ, ಶ್ರೀವಾರಿ ಟಾಕೀಸ್ ಸೇರಿ ಎಂಟು ಸಿನಿಮಾ ಸಂಸ್ಥೆಗಳು ಮತ್ತು 33 ಮಂದಿ ವ್ಯಕ್ತಿಗಳು ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಸೂರಜ್ ಗೋವಿಂದರಾಜ್ ಮತ್ತು ಕೆ. ರಾಜೇಶ್ ರೈ ಅವರ ರಜಾಕಾಲೀನ ವಿಭಾಗೀಯ ಪೀಠ ಇಂದು ವಿಚಾರಣೆ ನಡೆಸಲಿದೆ




