
CHIKKANAYAKANAHALLI FARMERS PROTEST : ಹುಳಿಯಾರು ಪಟ್ಟಣದಲ್ಲಿರುವ ವಾರದ ಸಂತೆ ಮೈದಾನವನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಲು ಹಾಗೂ ಸಂತೆ ನಡೆಯುವ ಸ್ಥಳದಲ್ಲಿ ನೆರಳು, ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಗಳನ್ನು ಒದಗಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹೊಸಹಳ್ಳಿ ಚಂದ್ರಣ್ಣ ಬಣದಿಂ ದ ಹುಳಿಯಾರು ಪಟ್ಟಣ ಪಂಚಾಯಿತಿ ವಿರುದ್ಧ ಅಹೋರಾತ್ರಿ ಧರಣಿ ಪುನಃ ಆರಂಭವಾಗಿದೆ.
ಕಳೆದ 15 ದಿನಗಳ ಹಿಂದೆ ನಡೆದ ಪ್ರತಿಭಟನೆಯಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸಮಯಾವಕಾಶ ದೊಳಗೆ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಸಮಸ್ಯೆ ಪರಿಹರಿಸುವಲ್ಲಿ ಆಡಳಿ ತವು ವಿಫಲವಾದ ಹಿನ್ನೆಲೆಯಲ್ಲಿ ರೈತ ಸಂಘವು ಧರಣಿಯನ್ನು ಪುನರಾರಂಭಿಸಿದೆ. ಈ ಹಿಂದೆ ನೀಡಿದ ಭರವಸೆಗಳನ್ನು ಈಡೇರಿಸದ ಸ್ಥಳೀಯ ಆಡಳಿತವನ್ನು ಪ್ರತಿಭಟನಕಾರರು ವಚನ ಭ್ರಷ್ಟ ಎಂದು ಖಂಡಿಸಿ, ಸ್ಥಳೀಯ ಆಡಳಿತಕ್ಕೆ ಇನ್ನೂ 20 ವರ್ಷಗಳ ಕಾಲಾವಕಾಶ ನೀಡಿದರೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದಿಲ್ಲ ಎಂದು ಪ್ರತಿಭಟನಕಾರರು ದೂರಿದರು. ಹಾಡು ಭಜನೆಗಳನ್ನು ಹಾಡುವ ಮೂಲಕ ಧರ ಣಿಯನ್ನು ನಡೆಸಿದ್ರು.
ಈ ವೇಳೆ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ, ತಾಲ್ಲೂಕು ಅಧ್ಯಕ್ಷ ಕರಿಯಪ್ಪ, ಹೋಬಳಿ ಅಧ್ಯಕ್ಷ ಕೆಂಕೆರೆ ಬಸವರಾಜು, ತುಮಕೂರು ಜಿಲ್ಲಾ ಕಾರ್ಯದರ್ಶಿ ಕಲ್ಲಹಳ್ಳಿ ಮಲ್ಲೇಶಯ್ಯ ಇತರರು ಹಾಜರಿದ್ರು.




