
CM Siddaramaiah conducted an aerial survey in Kalburgi : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಭೀಮಾ ನದಿಯ ತೀರ ಪ್ರದೇಶಗಳಲ್ಲಿ ಸಂಭವಿಸಿರುವ ಪ್ರವಾಹ ದ ಹಾನಿ ಕುರಿತು ಪ್ರಾಥಮಿಕ ಸಮೀಕ್ಷೆ ನಡೆಸಿದರು. ವಿಮಾನ ನಿಲ್ದಾಣದಲ್ಲಿಯೇ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಪ್ರವಾಹದಿಂದ ಉಂಟಾದ ಬೆಳೆ ಹಾನಿ, ಮನೆ ನಷ್ಟ, ಸ್ಥಳಾಂತರದ ಅಗತ್ಯತೆ ಇತ್ಯಾದಿ ವಿಷಯಗಳ ಬಗ್ಗೆ ವಿವರವಾದ ಮಾಹಿತಿ ಪಡೆದುಕೊಂಡರು.
ಇನ್ನು ಸಭೆಯಲ್ಲಿ ಕಲಬುರಗಿ, ಬೀದರ್, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳ ಅಧಿಕಾರಿಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳು ಭಾಗವಹಿಸಿದ್ದರು.
ಸಭೆಯ ನಂತರ, ಸಿಎಂ ಸಿದ್ದರಾಮಯ್ಯ ಅವರು, ಸಚಿವರುಗಳಾದ ಎಂ.ಬಿ. ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಅವರೊಂದಿಗೆ ಮೊದಲ ಹಂತದ ವೈಮಾನಿಕ ಸಮೀಕ್ಷೆಗೆ ಹೊರಟರು. ಈ ಸಮೀಕ್ಷೆಯಲ್ಲಿ ಪ್ರವಾಹದಿಂದ ಗಂಭೀರವಾಗಿ ಭಾದಿತ ಪ್ರದೇಶಗಳನ್ನು ವೀಕ್ಷಣೆ ಮಾಡಲಾಯಿತು.
ಇದಾದ ಬಳಿಕ ಬೀದರ್ ಜಿಲ್ಲಾ ವ್ಯಾಪ್ತಿಯಲ್ಲಿನ ಬೆಳೆ ಹಾನಿ ಕುರಿತು ಎರಡನೇ ಸುತ್ತಿನ ವೈಮಾನಿಕ ಸಮೀಕ್ಷೆಯನ್ನು ಮಧ್ಯಾಹ್ನ 2:30 ರ ಸುಮಾರಿಗೆ ಕೈಗೊಳ್ಳಲಿದ್ದಾರೆ.




