
Vijayendra visits heavy rain-hit areas in Kalburgi : ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಹೊನಗುಂಟ ಗ್ರಾಮದಲ್ಲಿ ನಡೆದ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕರಾದ ಬಿ.ವೈ. ವಿಜಯೇಂದ್ರ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು. ಅವರ ಜೊತೆ ಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸಹ ಆಗಮಿಸಿದ್ದರು.
ಇದೇ ವೇಳೆ ಅವರು ಸಂಕಷ್ಟಕ್ಕೆ ಒಳಗಾದ ರೈತರು ಮತ್ತು ಸ್ಥಳೀಯರೊಂದಿಗೆ ಸಂವಾದ ನಡೆಸಿದ ವಿಜಯೇಂದ್ರ ಮತ್ತು ನಾರಾಯಣಸ್ವಾಮಿ ಅವರು, ರೈತರ ಕಷ್ಟ ಆಲಿಸಿ ಅವರಿಗೆ ಆತ್ಮಸ್ಥೈರ್ಯ ತುಂಬಿದರು. ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವು ಒದಗಿಸಲು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಶಾಸಕ ಬಸವರಾಜ ಮತ್ತಿಮೂಡ, ಮಾಜಿ ಸಂಸದ ಡಾ. ಉಮೇಶ್ ಜಾಧವ್, ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ. ಎಸ್. ಪಾಟೀಲ್ ನಡಹಳ್ಳಿ, ವಿಧಾನ ಪರಿಷತ್ ಸದಸ್ಯ ಬಿ. ಜಿ. ಪಾಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯ ಅಮರನಾಥ್ ಪಾಟೀಲ್, ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ ಸೇರಿದಂತೆ ಹಲವು ಜಿಲ್ಲಾ ಹಾಗೂ ಸ್ಥಳೀಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.




