
Heavy rain in North Karnataka : ಕರ್ನಾಟಕದ ಹಲವೆಡೆ ವರುಣ (rain) ಅಬ್ಬರಿಸುತ್ತಿದ್ದಾನೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಗೆ ಜನರ ಬದುಕೇ ಕೊಚ್ಚಿ ಹೋಗುತ್ತಿದೆ. ಹೀಗಾಗಿ ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ (Flood Situation) ನಿಭಾಯಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ (CM siddaramaiah) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇತ್ತ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಐತಿಹಾಸಿಕ ತ್ರಿಪುರಾಂತ ಕೆರೆ ಒಡೆದಿದೆ. ಇದರಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಹೋಗಿ ಸಮೀಪದ ಬಸವಕಲ್ಯಾಣದ ಜಮೀನು ಸಂಪೂರ್ಣ ಜಲಾವೃತವಾಗಿದೆ.
ತ್ರಿಪುರಾಂತ ಕೆರೆ(lake) ತುಂಬಿರುವ ಕಾರಣ ತ್ರಿಪುರಾಂತ ಕೆರೆಯ ಕೆಳಭಾಗದಲ್ಲಿರುವ ಗಾರ್ಡನ್ ಸಂಪೂರ್ಣವಾಗಿ ಮುಳುಗಡೆಗೊಂಡಿದೆ. ಅಲ್ದೇ ಇದರಿಂದ ಸಮೀಪದ ರಸ್ತೆಗಳು ಮತ್ತು ಕೆಲವು ಬಡಾವಣೆಗಳು ನೀರಿನ ಜಲಾವೃತವಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಇನ್ನು ಈ ಭೀಕರ ಪ್ರವಾಹದಲ್ಲಿ ನೀರು ನುಗ್ಗಿ ನಾಶಗೊಂಡ ಜಮೀನಿನ ದೃಶ್ಯಗಳನ್ನು ಡ್ರೋನ್ ಕ್ಯಾಮರಾಗಳ ಮೂಲಕ ಸೆರೆಹಿಡಿಯಲಾಗಿದೆ.
ಇನ್ನು ಮಾನವ ಮತ್ತು ರಾಸುಗಳ, ಜಾನವಾರುಗಳ ಪ್ರಾಣ ಹಾನಿ ಆಗದಂತೆ ಎಚ್ಚರಿಕಾ ಕ್ರಮ ತೆಗೆದುಕೊಳ್ಳಲಿ ಸೂಚಿಸಲಾಗಿದೆ.ಅಲ್ದೇ ಸಂತ್ರಸ್ಥರಿಗೆ ಆಹಾರ ಕೇಂದ್ರಗಳು, ಜಾನವಾರುಗಳಿಗೆ ಅಗತ್ಯ ಮೇವಿನ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.




