
Sira : ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿರುವುದನ್ನು ಖಂಡಿಸಿ, ಸಂಪುಟಕ್ಕೆ ಮರು ಸೇರ್ಪಡೆ ಮಾಡುವಂತೆ ಒತ್ತಾಯಿಸಲು ಪೂರ್ವ ಬಾವಿಸಭೆ ಏರ್ಪಡಿಸಲಾಗಿದೆ. ಈ ಸಭೆಗೆ ಸಿಂಗನಹಳ್ಳಿ ರಾಜ್ಕುಮಾರ್ ತೆರಳುತ್ತಿದ್ದು, ಶಿರಾ ಮೂಲಕ ಶಿರಾ ಮೂಲಕ ಚಿಕ್ಕನಾಯಕನಹಳ್ಳಿ ತಾಲೂಕು ಪ್ರಯಾಣ ಬೆಳೆಸಿ, ಮಾರ್ಗ ಮಧ್ಯೆ ಬುಕ್ಕಾಪಟ್ಟಣದ ಡಿಸಿಸಿ ಬ್ಯಾಂಕ್ ಗೆ ಭೇಟಿ ನೀಡಿದ್ರು. ಈ ಸಂದರ್ಭದಲ್ಲಿ ಇಲ್ಲಿಯ ಮುಖಂಡರು ರಾಜ್ ಕುಮಾರ್ ಅವರನ್ನು ಸ್ವಾಗತಿಸಿ, ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಿಂಗದಹಳ್ಳಿ ರಾಜ್ಕುಮಾರ್ ಮಾತನಾಡಿ, ಸಹಕಾರ ಸಚಿವರಾಗಿದ್ದ ಕೆ.ಎನ್.ರಾಜಣ್ಣ ನಾಯಕ ಜನಾಂಗದ ಪ್ರಭಾವಿ ಮುಖಂಡ. ನೇರ ನಡೆ-ನುಡಿ, ದಿಟ್ಟ ಹೋರಾಟಗಾರ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿರುವುದು ಘನ ಘೋರ ಅನ್ಯಾಯ ಎಂದರು. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನ ಸಿಬ್ಬಂದಿಗಳು, ಮುಖಂಡರುಗಳು ಹಾಜರಿದ್ದರು.




